ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆ
ಬಳ್ಳಾರಿ, 17 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಜಿಲ್ಲೆಯಲ್ಲಿ ಇದೇ ಡಿ.21 ರಿಂದ 24 ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ಪಲ್ಸ್ ಪೋಲಿಯೋ ಲಸಿಕೆ ನೀಡಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಹೇಳಿದ್ದಾರೆ.
ಜಿಲ್ಲಾ ಟಾಸ್ಕ್  ಫೋರ್ಸ್ ಸಮಿತಿ ಸಭೆ


ಬಳ್ಳಾರಿ, 17 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಜಿಲ್ಲೆಯಲ್ಲಿ ಇದೇ ಡಿ.21 ರಿಂದ 24 ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ಪಲ್ಸ್ ಪೋಲಿಯೋ ಲಸಿಕೆ ನೀಡಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಹೇಳಿದ್ದಾರೆ.

ನಗರದ ಜಿಲ್ಲಾಡಳಿತ ಭವನದ ವಿಡಿಯೋ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಎರಡನೇ ಹಂತದ ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇದೇ ಡಿಸೆಂಬರ್ 21 ರಂದು ಬೂತ್ ಮಟ್ಟದ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಡಿ.22, 23 ರಂದು ಗ್ರಾಮೀಣ ಪ್ರದೇಶದಲ್ಲಿ ಹಾಗೂ ಡಿ.22 ರಿಂದ 24 ರವರೆಗೆ ಮನೆ ಮನೆಗೆ ಭೇಟಿ ನೀಡಿ ಪಲ್ಸ್ ಪೋಲಿಯೋ ಲಸಿಕೆ ನೀಡಲಾಗುತ್ತಿದೆ. ಯಾವುದೇ ಅರ್ಹ ಮಗು ಈ ಲಸಿಕೆಯಿಂದ ವಂಚಿತರಾಗದಂತೆ ನಿಗಾವಹಿಸಲು ಅವರು ಸೂಚಿಸಿದರು.

ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಬಗ್ಗೆ ಪಾಲಕರಲ್ಲಿ ಅರಿವು, ಶಾಲಾ ಮಕ್ಕಳಿಗೆ ಸೂಕ್ತ ಜಾಗೃತಿ ಕಾರ್ಯಕ್ರಮ, ಶಿಕ್ಷಕರ ಮೂಲಕ ಮಕ್ಕಳಿಗೆ ಲಸಿಕೆ ಹಾಕಿಸಲು, ಅವಶ್ಯಕ ಕ್ರಮ ಕೈಗೊಳ್ಳಬೇಕು. ಲಸಿಕಾ ಸಿಬ್ಬಂದಿಗಳಿಗೆ ಸೂಕ್ತ ವಾಹನಗಳ ವ್ಯವಸ್ಥೆ ಮಾಡಲು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.

ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಸಂಬಂಧಿಸಿದ ತಂಡಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಯಾವುದೇ ಮಗು ಪೋಲಿಯೋ ಲಸಿಕೆಯಿಂದ ವಂಚಿತರಾಗದಂತೆ ನಿಗಾವಹಿಸಬೇಕು.

ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಜನನಿಬೀಡ, ದೂರದ ಪ್ರದೇಶ, ವಲಸಿಗ ಕಾರ್ಮಿಕರ ಮಕ್ಕಳು, ಜಿಲ್ಲೆಗೆ ಆಗಮಿಸುವ ಕಾರ್ಮಿಕರ ಹಾಗೂ ವಿವಿಧ ಸಮುದಾಯ ವ್ಯಾಪ್ತಿಯಲ್ಲಿನ ಮಕ್ಕಳನ್ನು, ಗುರುತಿಸಿ ಲಸಿಕೆ ಹಾಕಿಸಬೇಕು ಎಂದರು.

ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ ಅವರು ಮಾತನಾಡಿ, ಜಿಲ್ಲೆಯಲ್ಲಿ ಈ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಅಂಗವಾಗಿ 1,89,745 ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ.

ಇದಕ್ಕಾಗಿ ಒಟ್ಟು 920 ಬೂತ್ ಮಟ್ಟದ ಲಸಿಕಾ ತಂಡಗಳನ್ನು ರಚಿಸಲಾಗಿದ್ದು, 49 ಟ್ರಾನ್ಸಿಟ್(ಸಂಚಾರಿ) ತಂಡಗಳನ್ನು ನೇಮಿಸಲಾಗಿದೆ. 1,968 ಲಸಿಕಾ ಸಿಬ್ಬಂದಿಗಳು, 984 ತಂಡಗಳು ಮನೆ ಮನೆಗೆ ಭೇಟಿ ನೀಡಲಿವೆ, ಎಲ್ಲಾ ತಂಡಗಳಿಗೆ ಲಸಿಕೆ ನೀಡುವ ವಿಧಾನ ಕುರಿತು ತರಬೇತಿ ನೀಡಲಾಗಿದೆ ಎಂದು ಸಭೆಗೆ ತಿಳಿಸಿದರು.

ನಗರಸಭೆ ಮತ್ತು ಇನ್ನಿತರೆ ಸ್ಥಳೀಯ ಸಂಸ್ಥೆಗಳ ವತಿಯಿಂದ ಪಲ್ಸ್ ಪೆÇೀಲಿಯೋ ಕಾರ್ಯಕ್ರಮದ ಕುರಿತು ಆಡಿಯೋ ಮೂಲಕ ಕಸ ವಿಲೇವಾರಿ ವಾಹನಗಳಲ್ಲಿ ಪ್ರಚುರಪಡಿಸಬೇಕು. ಸಾಮಾಜಿಕ ಜಾಲತಾಣಗಳ ಮೂಲಕ ಜಾಗೃತಿ ವಿಡೀಯೋ ಚಿತ್ರೀಕರಿಸಿ ಪ್ರಚಾರ ಕೈಗೊಳ್ಳಬೇಕು ಎಂದು ತಿಳಿಸಿದರು.

ಲಸಿಕಾ ಕಾರ್ಯಕ್ಕೆ ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು, ಎನ್ ಸಿಸಿ, ಗೃಹರಕ್ಷಕ ದಳ, ಎನ್ ಜಿಓ ಸಂಸ್ಥೆಗಳ ಸಹಕಾರ ಪಡೆದುಕೊಳ್ಳಬೇಕು. ಸಾಧ್ಯವಾದಲ್ಲಿ ಲಸಿಕೆ ಪಡೆದ ಮಕ್ಕಳ ಪೋಷಕರ ಮೊಬೈಲ್ ಸಂಖ್ಯೆ ಮಾಹಿತಿ ಪಡೆದುಕೊಳ್ಳಬಹುದು. ಇದರಿಂದ ಮುಂದಿನ ಅಭಿಯಾನಗಳಲ್ಲಿ ಸಹಾಯವಾಗಲಿದೆ ಎಂದು ನಿರ್ದೇಶನ ನೀಡಿದ ಜಿಲ್ಲಾಧಿಕಾರಿಯವರು ಲಸಿಕಾ ಕಾರ್ಯದ ತಂಡದವರಿಗೆ ಅಭಿಯಾನದ ಕ್ಯಾಪ್, ಊಟದ ವ್ಯವಸ್ಥೆ ಕೈಗೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಮುಖ್ಯವಾಗಿ ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳು, ಕಾರ್ಮಿಕರ ಮಕ್ಕಳು, ಗಣಿಗಾರಿಕೆ ಕಾರ್ಮಿಕರ ಮಕ್ಕಳು ಹಾಗೂ ಇತರೆ ವಲಸೆ ಪ್ರದೇಶಗಳಲ್ಲಿ ಹುಟ್ಟಿನಿಂದ 05 ವರ್ಷದೊಳಗಿನ ಮಕ್ಕಳನ್ನು ಗುರುತಿಸಿ ಲಸಿಕೆ ಹಾಕಿಸುವಂತೆ ಕ್ರಮವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಅವರು ಮಾತನಾಡಿ, ಸಂಡೂರು ಭಾಗದ ಎಲ್ಲಾ ಗ್ರಾಮಗಳೂ ಕೂಡ ಪಲ್ಸ್ ಪೋಲಿಯೋ ಲಸಿಕೆ ನೀಡಬೇಕು. ಅದರಲ್ಲೂ ಜೆಎಸ್ ಡಬ್ಲ್ಯೂ, ಎನ್‍ಎಂಡಿಸಿ ಕೈಗಾರಿಕಾ ಪ್ರದೇಶಗಳಲ್ಲಿ ವಾಸಿಸುತ್ತಿರುವ ಮತ್ತು ಹೊರ ರಾಜ್ಯದಿಂದ ಬಂದಂತಹ ಕಾರ್ಮಿಕರ ಮಕ್ಕಳನ್ನು ಗುರುತಿಸಿ ಪ್ರತಿಯೊಂದು ಮಗುವಿಗೂ ಲಸಿಕೆ ನೀಡಬೇಕು ಎಂದು ತಾಕೀತು ಮಾಡಿದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande