
ವಿಜಯಪುರ, 17 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವತಿಯಿಂದ ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವ ಸ್ಪರ್ಧೆಗಳನ್ನು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಡಿ.18 ಹಾಗೂ 19ರಂದು ನಡೆಯಲಿದ್ದು, ವಿವಿಧ ಕಲಾಪ್ರಕಾರಗಳಲ್ಲಿ ಬಾಲ ಪ್ರತಿಭೆ, ಕಿಶೋರ ಪ್ರತಿಭೆ ಹಾಗೂ ಯುವ ಪ್ರತಿಭೆಗಳ ಸ್ಪರ್ಧೆಗಳು ಬೆಳಗ್ಗೆ 10 ಗಂಟೆಗೆ ಪ್ರಾರಂಭಗೊಳ್ಳಲಿವೆ.
ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಉದ್ಘಾಟಿಸುವರು.
ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್ ಪಾಟೀಲ ಗೌರವ ಉಪಸ್ಥಿತರಿರಲಿದ್ದು, ಅಧ್ಯಕ್ಷತೆಯನ್ನು ನಗರ ಶಾಸಕರಾದ ಬಸನಗೌಡ ಆರ್.ಪಾಟೀಲ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತಿನ ವಿರೋಧ ಪಕ್ಷದ ಮುಖ್ಯ ಸಚೇತಕ ರವಿಕುಮಾರ ಎನ್, ಶಾಸಕರು ಆದ ನವದೆಹಲಿಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ-2 ಪ್ರಕಾಶ ಬಿ. ಹುಕ್ಕೇರಿ, ಶಾಸಕರಾದ ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತದ ಅಧ್ಯಕ್ಷರಾದ ಅಪ್ಪಾಜಿ ಸಿ. ಎಸ್.ನಾಡಗೌಡ, ಲೋಕಸಭೆ ಸಂಸದ ರಮೇಶ ಚಂ. ಜಿಗಜಣಗಿ, ಡಾ. ಸುಧಾ ಮೂರ್ತಿ, ವಿಧಾನಸಭೆಯ ಶಾಸಕರುಗಳಾದ ಯಶವಂತರಾಯಗೌಡ ವ್ಹಿ.ಪಾಟೀಲ, ಹಣಮಂತ ಆರ್.ನಿರಾಣೆ, ಸುನೀಲಗೌಡ ಬಿ. ಪಾಟೀಲ, ಪಿ.ಎಚ್.ಪೂಜಾರ, ವಿಠ್ಠಲ ಧೋಂಡಿಬಾ ಕಟಕಧೋಂಡ, ಭೀಮನಗೌಡ (ರಾಜುಗೌಡ)ಬಸನಗೌಡ ಪಾಟೀಲ, ಅಶೋಕ ಮಲ್ಲಪ್ಪ ಮನಗೂಳಿ, ಕೇಶವ ಪ್ರಸಾದ ಎಸ್, ಕರ್ನಾಟಕ ಕೌಶಲಾಭಿವೃದ್ಧಿ ನಿಗಮದ ಅಧ್ಯಕ್ಷರಾದ ಕಾಂತಾ ನಾಯ್ಕ, ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಅಪ್ಪಾಸಿ ಬಬಲೇಶ್ವರ, ಇಂಡಿಯ ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಬಿ.ಎಸ್.ಕವಲಗಿ, ಪಾಲಿಕೆಯ ಮಹಾಪೌರರಾದ ಮಡಿವಾಳಪ್ಪ ಸಿದ್ದರಾಮಪ್ಪ ಕರಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕನಾನ್ ಅಬ್ದುಲ್ ಹಮೀದ ಮುಶ್ರೀಫ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಇಲಿಯಾಸ ಬೋರಾಮಣಿ ಅವರು ಭಾಗವಹಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಜಿಲ್ಲಾಧಿಕಾರಿ ಡಾ.ಆನಂದ.ಕೆ, ಜಿಲ್ಲಾ ಪಂಚಾತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಿಷಿ ಆನಂದ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷö್ಮಣ ನಿಂಬರಗಿ ಅವರು ಆಗಮಿಸಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande