
ಕೊಪ್ಪಳ, 17 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಕೃಷಿ ಇಲಾಖೆ ವತಿಯಿಂದ ಡಿಸೆಂಬರ್ 18 ರಂದು ಬೆಳಿಗ್ಗೆ 10 ಗಂಟೆಗೆ ಕೊಪ್ಪಳ ತಾಲ್ಲೂಕು ಪಂಚಾಯತ್ ಆವರಣದಲ್ಲಿನ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದಲ್ಲಿ 2025-26ನೇ ಸಾಲಿನ ಜಿಲ್ಲಾ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ಸಿರಿಧಾನ್ಯಗಳು ಪೋಷಕಾಂಶಗಳಿಂದ ಸಮೃದ್ಧವಾಗಿದ್ದು, ಹೃದಯದ ಆರೋಗ್ಯ, ಮಧುಮೇಹ ನಿಯಂತ್ರಣ ಮತ್ತು ತೂಕ ಸಮತೋಲನಕ್ಕೆ ಸಹಾಯ ಮಾಡುತ್ತವೆ. ಈ ಆಹಾರಗಳ ಉಪಯುಕ್ತತೆ ಬಗ್ಗೆ ಈ ರೀತಿಯ ಸ್ಪರ್ಧೆಗಳು ನಮ್ಮ ಪಾರಂಪರಿಕ ಆಹಾರ ಪದ್ಧತಿಗಳನನು ಮತ್ತೆ ಜನಪ್ರಿಯಗೊಳಿಸಲು ಸಹಾಯ ಮಾಡುತ್ತವೆ. ಈ ಕಾರ್ಯಕ್ರಮದಿಂದ ಜನರು ತಮ್ಮ ದಿನನಿತ್ಯದ ಆಹಾರ ಪದ್ಧತಿಯಲ್ಲಿ ಸಿರಿಧಾನ್ಯಗಳನ್ನು ಅಳವಡಿಸಿಕೊಳ್ಳಲು ಪ್ರೋತ್ಸಾಹ ನೀಡಿದಂತಾಗುತ್ತದೆ.
ವಿದ್ಯಾರ್ಥಿಗಳನ್ನು ಹೊರತುಪಡಿಸಿ ಎಲ್ಲ ಸಾರ್ವಜನಿಕರು ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಈ ಕಾರ್ಯಕ್ರಮಕ್ಕೆ ಎಲ್ಲ ಇಲಾಖೆಗಳ ಅಧಿಕಾರಿಗಳು ತಮ್ಮ ಸಿಬ್ಬಂದಿಯೊಂದಿಗೆ ಭಾಗವಹಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕರಾದ ಜಿ.ಡಿ.ಕೃಷ್ಣಮೂರ್ತಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್