
ಹೊಸಪೇಟೆ, 17 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಬಳ್ಳಾರಿ ಅವರ ಅಧ್ಯಕ್ಷತೆಯಲ್ಲಿ ಡಿಸೆಂಬರ್ 18 ರಂದು ಬೆಳಗ್ಗೆ 11 ಗಂಟೆಗೆ, ನಗರ ಕಾರ್ಯ ಮತ್ತು ಪಾಲನೆ ವಿಭಾಗ ಕಚೇರಿ ಹೊಸಪೇಟೆಯಲ್ಲಿ ಹೆಚ್‍ಟಿ ಮತ್ತು ಇಹೆಚ್‍ಟಿ ಗ್ರಾಹಕರ ಕುಂದುಕೊರತೆ ಸಭೆಯನ್ನು ಆಯೋಜಿಸಲಾಗಿದೆ.
ಹೊಸಪೇಟೆ ಮತ್ತು ಹಗರಿಬೊಮ್ಮನಹಳ್ಳಿ ವ್ಯಾಪ್ತಿಯ ಹೆಚ್‍ಟಿ, ಮತ್ತು ಇಹೆಚ್‍ಟಿ ಗ್ರಾಹಕರು ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಕುಂದುಕೊರತೆಗಳನ್ನು ಬಗೆಹರಿಸಿಕೊಳ್ಳಬೇಕೆಂದು ಕಾರ್ಯ ಮತ್ತು ಪಾಲನಾ ನಗರ ವಿಭಾಗ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್