ನ್ಯಾಷನಲ್ ಹೆರಾಲ್ಡ್ ಪ್ರಕರಣ ; ನ್ಯಾಯಾಲಯ ನ್ಯಾಯ ಎತ್ತಿ ಹಿಡಿದಿದೆ-ಸಿದ್ದರಾಮಯ್ಯ
ಬೆಳಗಾವಿ, 17 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಬಿಜೆಪಿಯು ದ್ವೇಷ ರಾಜಕಾರಣದಲ್ಲಿ ತೊಡಗಿದ್ದು, ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದೆ. ಬಿಜೆಪಿಯ ಈ ಕುತಂತ್ರಕ್ಕೆ ಉತ್ತರವಾಗಿ ನ್ಯಾಯಾಲಯದಲ್ಲಿ ನ್ಯಾಯ ದೊರೆತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
Cm protest


ಬೆಳಗಾವಿ, 17 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಬಿಜೆಪಿಯು ದ್ವೇಷ ರಾಜಕಾರಣದಲ್ಲಿ ತೊಡಗಿದ್ದು, ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದೆ. ಬಿಜೆಪಿಯ ಈ ಕುತಂತ್ರಕ್ಕೆ ಉತ್ತರವಾಗಿ ನ್ಯಾಯಾಲಯದಲ್ಲಿ ನ್ಯಾಯ ದೊರೆತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡಿದೆ ಎಂದು ಖಂಡಿಸಿ, ಈ ಪ್ರಕರಣದಲ್ಲಿ ED ಸಲ್ಲಿಸಿದ ಆರೋಪ ಪಟ್ಟಿಯನ್ನು ಸಾರಾಸಗಟಾಗಿ ತಿರಸ್ಕರಿಸಿದ ವಿಚಾರಣಾ ನ್ಯಾಯಾಲಯದ ತೀರ್ಮಾನವನ್ನು ಬೆಂಬಲಿಸಿ ಎಂಎಲ್ ಎ ಹಾಗೂ ಎಂಎಲ್ ಸಿ ಗಳೊಂದಿಗೆ ಬೆಳಗಾವಿ ಸುವರ್ಣ ಸೌಧದ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಬಿಜೆಪಿಯವರ ದ್ವೇಷದ ರಾಜಕಾರಣ. ಕೇಂದ್ರ ಅಥವಾ ರಾಜ್ಯಗಳಾಗಲಿ, ಬಿಜೆಪಿ ಅಧಿಕಾರದಲ್ಲಿರುವ ಕಡೆಗಳೆಲ್ಲಾ ಕಾಂಗ್ರೆಸ್ ನವರನ್ನು ಗುರಿಯಾಗಿಸಿ, ಅವರನ್ನು ಅಪರಾಧಿಗಳಾಗಿ ಬಿಂಬಿಸಿ, ನ್ಯಾಯಾಲಯಕ್ಕೆ ಎಡತಾಕುವಂತೆ ಮಾಡುತ್ತಿದ್ದಾರೆ. ಇಂತಹ ಅಸತ್ಯವಾದ ವಿಚಾರವನ್ನು ಮುನ್ನಲೆಗೆ ತಂದು ಬಿಜೆಪಿಯು ದುರುದ್ದೇಶದಲ್ಲಿ ತೊಡಗಿದ್ದಾರೆ. ಬಿಜೆಪಿಯವರು ತಮ್ಮ ತಪ್ಪುಗಳನ್ನು ಮರೆಮಾಚಲು ಇಂತಹ ದುಷ್ಕೃತ್ಯಕ್ಕೆ ಕೈಹಾಕಿದ್ದಾರೆ. ಇಂದು ದೇಶದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ದೇಶದಲ್ಲಿ ಹಣದುಬ್ಬರ ಹೆಚ್ಚಿದ್ದು ನಿರುದ್ಯೋಗದ ಪ್ರಮಾಣ ಏರಿಕೆಯಾಗಿದೆ. ಜನರ ಮೇಲೆ ತೆರಿಗೆಗಳನ್ನು ಮನಬಂದಂತೆ ಹೇರಿ, ಭಾರತವನ್ನು ಸಾಲಗಾರ ದೇಶವನ್ನಾಗಿ ಮಾಡಲಾಗುತ್ತಿದೆ ಎಂದರು.

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯು 1937 ರಲ್ಲಿ ಜವಾಹರ್ ಲಾಲ್ ನೆಹರೂ ರವರು ದೇಶದ ಜನರಲ್ಲಿ ಸ್ವಾತಂತ್ರ್ಯ ಹೋರಾಟದ ಬಗ್ಗೆ ಜಾಗೃತಿ ಮೂಡಿಸಲು ಈ ಪತ್ರಿಕೆಯನ್ನು ಪ್ರಾರಂಭಿಸಿದರು, ಇದು ಕಾಂಗ್ರೆಸ್ ಪಕ್ಷದ ಆಸ್ತಿ. ನಂತರ ಈ ಪತ್ರಿಕೆಯನ್ನು ಯಂಗ್ ಇಂಡಿಯನ್ ಸಂಸ್ಥೆ ವಹಿಸಿಕೊಂಡಿತು. ಸಂಸ್ಥೆಗೆ ಸೇರಿದ್ದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ , ಮೋತಿಲಾಲ್ ವೋರಾ ಮತ್ತು ಆಸ್ಕರ್ ಫರ್ನಾಂಡಿಸ್ ಇವರ ಮೇಲೆ ಪ್ರಕರಣ ದಾಖಲಿಸಿ, ಇಡಿ ತನಿಖೆಯನ್ನು ಮಾಡಿಸಲಾಯಿತು. 2012 ರಲ್ಲಿ ಸುಬ್ರಮಣ್ಯಂಸ್ವಾಮಿಯವರು ಇವರ ವಿರುದ್ಧ ದಾವೆ ಹೂಡಿದ್ದರು. ಪ್ರಸ್ತುತ ಇಡಿಯವರು ಸಲ್ಲಿಸಿದ್ದ ಆರೋಪ ಪಟ್ಟಿಯನ್ನು ವಿಚಾರಣಾ ನ್ಯಾಯಾಲಯ ತಿರಸ್ಕರಿಸಿದೆ. ಈ ಪ್ರಕರಣವನ್ನುಸುಳ್ಳು ಎಂದು ಹೈಕೋರ್ಟ್ ನ್ಯಾಯವನ್ನು ಎತ್ತಿ ಹಿಡಿದಿದೆ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande