ಡಿ.18 ರಂದು ಶೇಖರಗೌಡ ರಾಮತ್ನಾಳ ಜಿಲ್ಲಾ ಪ್ರವಾಸ
ಕೊಪ್ಪಳ, 17 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ರಾಮತ್ನಾಳ ಅವರು ಡಿಸೆಂಬರ್ 18 ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಅಂದು ಅವರು ಜಿಲ್ಲೆಯ ವಿವಿಧ ಶಾಲೆ, ಅಂಗನವಾಡಿ, ಗ್ರಾಮ ಪಂಚಾಯತ್, ವ
ಡಿ.18 ರಂದು ಶೇಖರಗೌಡ ರಾಮತ್ನಾಳ ಜಿಲ್ಲಾ ಪ್ರವಾಸ


ಕೊಪ್ಪಳ, 17 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ರಾಮತ್ನಾಳ ಅವರು ಡಿಸೆಂಬರ್ 18 ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.

ಅಂದು ಅವರು ಜಿಲ್ಲೆಯ ವಿವಿಧ ಶಾಲೆ, ಅಂಗನವಾಡಿ, ಗ್ರಾಮ ಪಂಚಾಯತ್, ವಸತಿ ನಿಲಯ, ಮಕ್ಕಳ ಪಾಲನಾ ಸಂಸ್ಥೆಗಳಿಗೆ ಭೇಟಿ ಮತ್ತು ಪರಿಶೀಲನೆ ನಡೆಸುವರು ಹಾಗೂ ಗಂಗಾವತಿ ತಾಲ್ಲೂಕಿನ ಶ್ರೀರಾಮನಗರದಲ್ಲಿರುವ ವಿದ್ಯಾನಿಕೇನ ಪಬ್ಲಿಕ್ ಶಾಲೆಯಲ್ಲಿ ನಡೆಯುವ ಮಕ್ಕಳ ಹಕ್ಕುಗಳು, ಮಕ್ಕಳಿಗೆ ಸಂಬಂಧಿಸಿದ ಕಾನೂನುಗಳು ಹಾಗೂ ಮಕ್ಕಳ ಸುರಕ್ಷತೆ ಕುರಿತು ನಡೆಯುವ ಮಕ್ಕಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಗಂಗಾವತಿ ತಾಲ್ಲೂಕಿನ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವರು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande