ಸ್ವಂತ ಸಂಪನ್ಮೂಲಗಳ ಬಳಕೆಯಿಂದ ಅಭಿವೃದ್ಧಿಗೆ ಮುಂದಾದ ಕಾನೂನು ವಿವಿ : ಸಚಿವ ಎಚ್.ಕೆ‌.ಪಾಟೀಲ
ಹುಬ್ಬಳ್ಳಿ, 17 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಗ್ರಂಥಾಲಯ, ಉಪಹಾರ ಗೃಹ, ಅನೆಕ್ಸ ಕಟ್ಟಡ, ಅತಿಥಿ ಗೃಹ ಹಾಗೂ ಬಾಲಕಿಯರ ವಸತಿ ನಿಲಯ ಕಟ್ಟಡಗಳ ಕಾಮಗಾರಿಗಳನ್ನು ರೂ.37 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ. ಈ ಎಲ್ಲಾ ಕಾಮಗಾರಿಗಳನ್ನು 11 ತಿಂಗಳ ಕಾ
Hkp


ಹುಬ್ಬಳ್ಳಿ, 17 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಗ್ರಂಥಾಲಯ, ಉಪಹಾರ ಗೃಹ, ಅನೆಕ್ಸ ಕಟ್ಟಡ, ಅತಿಥಿ ಗೃಹ ಹಾಗೂ ಬಾಲಕಿಯರ ವಸತಿ ನಿಲಯ ಕಟ್ಟಡಗಳ ಕಾಮಗಾರಿಗಳನ್ನು ರೂ.37 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ. ಈ ಎಲ್ಲಾ ಕಾಮಗಾರಿಗಳನ್ನು 11 ತಿಂಗಳ ಕಾಲಾವಧಿಯಲ್ಲಿ ಪೂರ್ಣಗೊಳಿಸಬೇಕು. ಸ್ವಂತ ಸಂಪನ್ಮೂಲಗಳ ಬಳಕೆಯಿಂದ ಅಭಿವೃದ್ಧಿಗೆ ಕಾನೂನು ವಿಶ್ವವಿದ್ಯಾಲಯ ಮುಂದಾಗಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ್ ಹೇಳಿದರು.

ಹುಬ್ಬಳ್ಳಿ ನವನಗರದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕಾನೂನು ಶಾಲೆಯ ಆವರಣದಲ್ಲಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ವಿವಿಧ ಕಟ್ಟಡಗಳ ಕಾಮಗಾರಿಗಳ ಶಂಕು ಸ್ಥಾಪನೆಯನ್ನು ನೆರವೇರಿಸಿ ಅವರು ಮಾತನಾಡಿದರು.

ಕಾಮಗಾರಿಗಳನ್ನು ನೀಡಿದ ಕಾಲಾವಕಾಶದಲ್ಲಿ ಮುಕ್ತಾಯಗೊಳಿಸುವ ಸಾಮರ್ಥ್ಯ ಏಜೆನ್ಸಿಗಳಿಗೆ ಇದೆ. ಕಾಮಗಾರಿಗಳನ್ನು ಕೈಗೊಂಡ ಅಧಿಕಾರಿಗಳಿಗೆ ಯಾವುದೇ ರೀತಿಯ ತೊಂದರೆಗಳು, ಸಮಸ್ಯೆಗಳು ಉಂಟಾದರೆ ಕೂಡಲೇ ನನಗೆ ಅಥವಾ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಗಮನಕ್ಕೆ ತರಬೇಕು. ಕಾಮಗಾರಿಯಲ್ಲಿ ವಿನಾಕಾರಣ ವಿಳಂಬವಾಗಬಾರದು ಎಂದು ಅವರು ತಿಳಿಸಿದರು.

ವಿಶ್ವವಿದ್ಯಾಲಯಕ್ಕೆ ಯಾವುದೇ ಹಣಕಾಸಿನ ತೊಂದರೆಯಿಲ್ಲ. ಸ್ವಂತ ಸಂಪನ್ಮೂಲಗಳ ಸ್ವಾವಲಂಬನೆ ನಿಧಿಯಿಂದ ರೂ‌.80 ಕೋಟಿ ವೆಚ್ಚದ ಕಾಮಗಾರಿಗಳನ್ನು ಕೈಗೊಂಡರೂ ಸಹ ಸುಮಾರು 50 ರಿಂದ 60 ಕೋಟಿ ಉಳಿಯಲಿದೆ. ಆದರ್ಶ ವಿಶ್ವವಿದ್ಯಾಲಯ ಮಾಡುವ ಗುರಿ ಹೊಂದಲಾಗಿದೆ. ಜಾಗದ ಬಗ್ಗೆ ಹಲವಾರು ರೀತಿಯ ಗೊಂದಲಗಳು ಉಂಟಾಗಿದ್ದು, ಪಾಲಿಕೆಯ ನಿಯೋಗ ಮುಖ್ಯಮಂತ್ರಿಗಳು, ಸಭಾಪತಿಗಳನ್ನು ಭೇಟಿ ಮಾಡಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande