
ಹೊಸಪೇಟೆ, 17 ಡಿಸೆಂಬರ್ (ಹಿ.ಸ.) :
ಆ್ಯಂಕರ್ : 110/11 ಕೆವಿ ವೆಂಕಟಾಪುರ ವಿದ್ಯುತ್ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮರಿಯಮ್ಮನಹಳ್ಳಿ ಶಾಖಾ ವ್ಯಾಪ್ತಿಯಲ್ಲಿ ಡಿಸೆಂಬರ್.18 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಕಾರ್ಯ ಮತ್ತು ಪಾಲನಾ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯನಿರ್ವಹಕ ಅಭಿಯಂತರರು ತಿಳಿಸಿದ್ದಾರೆ.
ಮರಿಯಮ್ಮನಹಳ್ಳಿ ಶಾಖಾ ವ್ಯಾಪ್ತಿಗೆ ಒಳಪಡುವ ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯಿತಿ, ಡಣಾಪುರ ಗ್ರಾಮ ಪಂಚಾಯಿತಿ, ಡಣಾಯಕನಕೆರೆ ಗ್ರಾಮ ಪಂಚಾಯಿತಿ ಮತ್ತು ನಾಗಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ನೀರಾವರಿ ಪಂಪ್ ಸೆಟ್ ರೈತರಿಗೆ ಬೆಳಗ್ಗೆ.4 ಗಂಟೆಯಿಂದ 10 ಗಂಟೆಯವರಗೆ ವಿದ್ಯುತ್ ಸರಬರಾಜು ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್