ಡಿ.20 ರಂದು ಪೂರ್ವಭಾವಿ ಸಿದ್ಧತಾ ಸಭೆ
ಬಳ್ಳಾರಿ, 17 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಡಿ.29 ರಂದು ಕುವೆಂಪು ಜನ್ಮದಿನ ವಿಶ್ವಮಾನವ ದಿನಾಚರಣೆ ಹಾಗೂ ಜ.01 ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿಯ ಸಂಸ್ಮರಣಾ ದಿನಾಚರಣೆ ಅಚ್ಚುಕಟ್ಟಾಗಿ ಆಯ
ಡಿ.20 ರಂದು ಪೂರ್ವಭಾವಿ ಸಿದ್ಧತಾ ಸಭೆ


ಬಳ್ಳಾರಿ, 17 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಡಿ.29 ರಂದು ಕುವೆಂಪು ಜನ್ಮದಿನ ವಿಶ್ವಮಾನವ ದಿನಾಚರಣೆ ಹಾಗೂ ಜ.01 ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿಯ ಸಂಸ್ಮರಣಾ ದಿನಾಚರಣೆ ಅಚ್ಚುಕಟ್ಟಾಗಿ ಆಯೋಜಿಸುವ ಕುರಿತು ಚರ್ಚಿಸಲು ಡಿ.20 ರಂದು ಸಂಜೆ 04 ಗಂಟೆಗೆ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ಏರ್ಪಡಿಸಲಾಗಿದೆ.

ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande