
ಹೊಸಪೇಟೆ, 17 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ರಾಷ್ಟ್ರೀಯ ಆರೋಗ್ಯ ಅಭಿಯಾನ ಪ್ರಧಾನ ಮಂತ್ರಿ ಜನಜಾತಿ ಆದಿವಾಸಿ ಮಹಾ ಅಭಿಯಾನ, ದರ್ತಿ ಅಭಾ ಜನ ಜಾತಿಯ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆಯಡಿಯಲ್ಲಿ ಜಿಲ್ಲೆಗೆ ಮಂಜೂರಾಗಿರುವ ನಾಲ್ಕು ಸಂಚಾರಿ ಆರೋಗ್ಯ ಘಟಕಗಳಿಗೆ ಅವಶ್ಯವಿರುವ ನಾಲ್ಕು ಪ್ರಯೋಗ ಶಾಲಾ ತಂತ್ರಜ್ಞರು ಮತ್ತು ನಾಲ್ಕು ಶುಶ್ರೂಷಕರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ, ಕಾಯ್ದಿರಿಸಿದ ಆಯ್ಕೆ ಪಟ್ಟಿ ಮತ್ತು ತಿರಸ್ಕರಿದ ಪಟ್ಟಿಗಳನ್ನು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ ಕಚೇರಿಯ ಸೂಚನ ಫಲಕದಲ್ಲಿ ಪ್ರಕಟಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ಡಿಸೆಂಬರ್ 22 ಸಂಜೆ 5 ಗಂಟೆಯೊಳಗೆ (ರಜಾ ದಿನಗಳನ್ನು ಹೊರತುಪಡಿಸಿ) ಕಚೇರಿಯ ಸಮಯದಲ್ಲಿ ಲಿಖಿತ ರೂಪದಲ್ಲಿ ಆಕ್ಷೇಪಣೆ ಸಲ್ಲಿಸಬೇಕೆಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಕೆ.ರಾಧಿಕ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್