ಡಿ.18 ರಂದು ವಿಶೇಷ ಉಪನ್ಯಾಸ
ಹೊಸಪೇಟೆ, 17 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸಾಹಿತ್ಯ ಅಕಾಡೆಮಿ, ಬೆಂಗಳೂರು ಚಕೋರ ಸಾಹಿತ್ಯ ವಿಚಾರ ವೇದಿಕೆ ಹಾಗೂ ಶ್ರೀ ಶಂಕರ್ ಆನಂದ್ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದಲ್ಲಿ ಡಿಸೆಂಬರ್. 18 ರಂದು ಬೆಳಿಗ್ಗೆ. 10.30 ಕ್ಕೆ ವಿಶೇಷ ಉ
ಡಿ.18 ರಂದು ವಿಶೇಷ ಉಪನ್ಯಾಸ


ಹೊಸಪೇಟೆ, 17 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸಾಹಿತ್ಯ ಅಕಾಡೆಮಿ, ಬೆಂಗಳೂರು ಚಕೋರ ಸಾಹಿತ್ಯ ವಿಚಾರ ವೇದಿಕೆ ಹಾಗೂ ಶ್ರೀ ಶಂಕರ್ ಆನಂದ್ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದಲ್ಲಿ ಡಿಸೆಂಬರ್. 18 ರಂದು ಬೆಳಿಗ್ಗೆ. 10.30 ಕ್ಕೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ನಗರದ ಶ್ರೀ ಶಂಕರ್ ಆನಂದ್ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಯೋಜಿಸಲಾಗಿದೆ.

ಹಂಪಿ ಕನ್ನಡ ವಿಶ್ವ ವಿದ್ಯಾಲಯದ ಕುಲಪತಿಗಳು ಪೆÇ್ರ.ಡಿ.ವಿ.ಪರಮಶಿವಮೂರ್ತಿ ಉದ್ಘಾಟಿಸಲಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಸಂಚಾಲಕ ಮತ್ತು ಸದಸ್ಯರಾದ ಡಾ. ಮಲ್ಲಿಕಾರ್ಜುನ.ಬಿ ಅವರು ಪ್ರಾಸ್ತಾವಿಕವಾಗಿ ಮಾತನಾಡುವರು. ಚಿಂತಕರು ಹಾಗೂ ವಿಶ್ರಾಂತ ಪ್ರಾಧ್ಯಾಪಕ ಡಾ:ಮೃತ್ಯುಂಜಯ ರುಮಾಲೆ ಅವರು ವ್ಯಕ್ತಿತ್ವ ರೂಪಿಸಿದ ವಚನ ಸಾಹಿತ್ಯದ ಬಗ್ಗೆ ಉಪನ್ಯಾಸ ಮಾಡಲಿದ್ದಾರೆ. ಶ್ರೀ ಶಂಕರ್ ಆನಂದ್ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ನಾರಾಯಣ ಹೆಬಸೂರ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಸಿ.ದೇವಣ್ಣ, ಪ್ರಾಧ್ಯಾಪಕರಾದ ಡಾ.ನಾಗಣ್ಣ ಕಿಲಾರಿ ಹಾಗೂ ಚಕೋರ ಸಾಹಿತ್ಯ ವಿಚಾರ ವೇದಿಕೆ ಸಂಚಾಲಕ ವೆಂಕಟೇಶ ಬಡಿಗೇರ. ಪ್ರಾರ್ಥನೆ ಮತ್ತು ಜಾಗೃತ ಗೀತೆಗಳ ಗಾಯನವನ್ನು ರಂಗಕರ್ಮಿ ಮುದೇನೂರು ಉಮಾಮಹೇಶ್ವರ ನೆರೆವೆರಿಸಲಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಸಂಚಾಲಕ ಡಾ.ಮಲ್ಲಿಕಾರ್ಜುನ.ಬಿ.ಮಾನ್ಪಡೆ, ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟರ್ ಎನ್.ಕರಿಯಪ್ಪ ಮತ್ತು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್.ಮುಕುಂದರಾಜ್ ಸ್ವಾಗತಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande