
ವಿಜಯಪುರ, 17 ಡಿಸೆಂಬರ್ (ಹಿ.ಸ.) :
ಆ್ಯಂಕರ್ : 79ನೇ ಸ್ವತಂತ್ರ್ಯ ದಿನಾಚರಣೆ ಅಂಗವಾಗಿ ಮಾಮ್ಸ ಸ್ಕೆಟ್ ಅಕಾಡೆಮಿ ವತಿಯಿಂದ ಆಲ್ ಇಂಡಿಯಾ ಸ್ಕೇಟಿಂಗ್ ತರಬೇತಿದಾರರ ಸಂಘಟನೆ ಆಯೋಜಿಸಿದ್ದ 79 ನಿಮಿಷಗಳ ನಿರಂತರ ಸ್ಟಾಪ್ ಸ್ಕೇಟಿಂಗ್ ಮ್ಯಾರಾಥಾನಲ್ಲಿ ನಗರದ ಪ್ರತಿಷ್ಠಿತ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳು ಯು. ಎನ್. ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ದಾಖಲೆ ನಿರ್ಮಿಸಿದ್ದಾರೆ.
ವಿಜಯಪುರದ ನಗರದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ದೇಶದ 22 ನಾನಾ ನಗರಗಳಲ್ಲಿ 572 ವಿದ್ಯಾರ್ಥಿಗಳು ವಿಶ್ವದಾಖಲೆ ಕಾರ್ಯಕ್ರಮದಲ್ಲಿ ಪಾಲ್ಗೋಂಡಿದ್ದರು. ಅದರ ಫಲಿತಾಂಶ ಈಗ ಪ್ರಕಟವಾಗಿದೆ.
ಈ ವಿದ್ಯಾರ್ಥಿಗಳಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಸ್ಕೂಲ್ ನ ಮೂರು ವಿದ್ಯಾರ್ಥಿಗಳು ಸೇರಿದಂತೆ ಒಟ್ಟು ವಿಜಯಪುರದ ಒಟ್ಟು 14 ವಿದ್ಯಾರ್ಥಿಗಳು 79 ನಿಮಿಷಗಳ ಕಾಲ ತಡೆರಹಿತ ಸ್ಕೇಟಿಂಗ್ ಮಾಡಿ ಈ ದಾಖಲೆಯಲ್ಲಿ ಹೆಸರು ದಾಖಲಿಸಿದ್ದಾರೆ. ಏಳನೇ ತರಗತಿಯ ವಿದ್ಯಾರ್ಥಿನಿ ಅಲ್ವಿನಾ ಪಟೇಲ, ಆರನೇ ತರಗತಿಯ ವಿದ್ಯಾರ್ಥಿ ಜೈನ್ ಬಾಗವಾನ, ಎಂಟನೇ ತರಗತಿ ವಿದ್ಯಾರ್ಥಿನಿ ಹೀರಾ ಮೆಹತಾ ವಿಶ್ವ ದಾಖಲೆ ಪುಸ್ತಕದಲ್ಲಿ ಈ ಸಾಧನೆ ಮಾಡಿದ್ದು, ಯು. ಎನ್. ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಹೊಸ ದಾಖಲೆ ಮಾಡಿರುವ ಪ್ರಮಾಣ ಪತ್ರ ನೀಡಿದೆ.
ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಿದರು.
ಬಳಿಕ ಮಾತನಾಡಿದ ಅವರು, ಇದು ವಿದ್ಯಾರ್ಥಿಗಳ ವಯಸ್ಸಿಗೆ ಮೀರಿದ ಸಾಧನೆಯಾಗಿದೆ. ಮಕ್ಕಳಲ್ಲಿ ಅಡಗಿರುವ ಸೂಪ್ತ ಪ್ರತಿಭೆಯನ್ನು ಹೊರತರುವುದು ಶಾಲೆಯ ಪ್ರಮುಖ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಪ್ರಾಚಾರ್ಯ ಡಾ. ಶೈಜೂ ಕೆ ನಾಯರ, ಹಿರಿಯ ಕಾರ್ಯ ಸಂಯೋಜಕಿ ದೀಪಾ ಜಂಬೂರೆ, ಶಾಲೆಯ ಬೋಧಕ ಹಾಗೂ ಬೋಧಕರ ಹೊರತಾದ ಸಿಬ್ಬಂದಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande