
ಕೊಪ್ಪಳ, 17 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಚನ್ನಬಸವ ನಗರದಲ್ಲಿರುವ ಎಜ್ಯುಕೇರ್ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಯಂಗ್ ಮೈಂಡ್ ಮೈಂಡ್ ಎಕ್ಸ್ಪೋ ಕಾರ್ಯಕ್ರಮ ಡಿ. 18 ರಂದು ನಡೆಯಲಿದೆ. ಈ ಕುರಿತು ಸಂಸ್ಥೆಯ ಅಧ್ಯಕ್ಷ ಡಾ. ಶ್ರೀನಿವಾಸ ಹ್ಯಾಟಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದ್ದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪನಿರ್ದೇಶಕ ಸೋಮಶೇಖರಗೌಡ ಬಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡುವರು.
ಹಿರಿಯ ವರದಿಗಾರ ಸೋಮರೆಡ್ಡಿ ಅಳವಂಡಿ, ನಿವೃತ್ತ ಉಪನ್ಯಾಸಕ ಬಸವರಾಜ ಸವಡಿ, ಇನ್ನರ್‌ವ್ಹೀಲ್ ಕ್ಲಬ್ ಅಧ್ಯಕ್ಷೆ ಮಧು ಪಾವಲಿಶೆಟ್ಟರ್, ಹಿರಿಯ ಉಪನ್ಯಾಸಕ ಗಿರಿಜಾಪತಿಸ್ವಾಮಿ, ಶಿಕ್ಷಕ ಆಬಿದ್‌ಹುಸೇನ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್