
ವಿಜಯಪುರ, 18 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ವಿಜಯಪುರ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವ ನಾಳೆ ಡಿಸೆಂಬರ್ 19ರಂದು ಶುಕ್ರವಾರ ಬಿ.ಎಲ್.ಡಿ.ಇ ಆವರಣದಲ್ಲಿರುವ ಕ್ರೀಡಾಂಗಣದ ವೇದಿಕೆಯಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.
ಈ ಘಟಿಕೋತ್ಸವದಲ್ಲಿ ನವದೆಹಲಿ ರಾಷ್ಟ್ರೀಯ ವೈದ್ಯಕೀಯ ಆಯೋಗದ ವೈದ್ಯಕೀಯ ಮೌಲ್ಯಮಾಪನ ಮತ್ತು ಶ್ರೇಯಾಂಕ ಮಂಡಳಿಯ ಅಧ್ಯಕ್ಷ ಡಾ. ಎಂ. ಕೆ. ರಮೇಶ್ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ, ವಿವಿ ಕುಲಾಧಿಪತಿ ಬಿ. ಎಂ. ಪಾಟೀಲ ಮುಂತಾದವರು ಉಪಸ್ಥಿತರಿರಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande