ವಿಕಲಚೇತನರಿಂದ ಖಾಲಿ ಇರುವ ವಿ ಆರ್ ಡಬ್ಲೂ ಹುದ್ದೆಗೆ ಅರ್ಜಿ ಆಹ್ವಾನ
ಹೊಸಪೇಟೆ, 18 ಡಿಸೆಂಬರ್ (ಹಿ.ಸ.) : ಆ್ಯಂಕರ್ : 2025-26 ನೇ ಸಾಲಿನ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ಕೊಟ್ಟೂರು ತಾಲೂಕಿನ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಅಲಬೂರು ಗ್ರಾಮ ಪಂಚಾಯಿತಿಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಖಾಲಿಯಿರುವ ಒಂದು ಹುದ್ದೆಗೆ ಅರ್ಹವಿಕಲಚೇತನರಿಂದ ಅ
ವಿಕಲಚೇತನರಿಂದ ಖಾಲಿ ಇರುವ ವಿ ಆರ್ ಡಬ್ಲೂ ಹುದ್ದೆಗೆ ಅರ್ಜಿ ಆಹ್ವಾನ


ಹೊಸಪೇಟೆ, 18 ಡಿಸೆಂಬರ್ (ಹಿ.ಸ.) :

ಆ್ಯಂಕರ್ : 2025-26 ನೇ ಸಾಲಿನ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ಕೊಟ್ಟೂರು ತಾಲೂಕಿನ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಅಲಬೂರು ಗ್ರಾಮ ಪಂಚಾಯಿತಿಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಖಾಲಿಯಿರುವ ಒಂದು ಹುದ್ದೆಗೆ ಅರ್ಹವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ರಾಮಾಂಜಿನೇಯ ಅವರು ತಿಳಿಸಿದ್ದಾರೆ.

ಅರ್ಜಿ ಸಲ್ಲಿಸುವ ಆಭ್ಯರ್ಥಿಗಳು ಅಲಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿಯಾಗಿರಬೇಕು. 18 ರಿಂದ 45 ವರ್ಷದ ವಯೋಮಿತಿಯಲ್ಲಿರಬೇಕು. ಎಸ್‍ಎಸ್‍ಎಲ್‍ಸಿ ಪಾಸಾದ ವಿಕಲಚೇತನರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ತಹಶೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ ಮತ್ತು ವಿಕಲಚೇತನ ಪ್ರತಿಶತ 40% ಮೇಲ್ಪಟ್ಟ ಯುಡಿಐಡಿ ಪ್ರಮಾಣ ಪತ್ರ ಲಗತ್ತಿಸಬೇಕು. ದೃಷ್ಟಿ ದೋಷವುಳ್ಳವರು, ಶ್ರವಣ ದೋಷವುಳ್ಳವರು ಮತ್ತು ದೈಹಿಕ ವಿಕಲಚೇತನರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತರೆ. ಆಧಾರ ಕಾರ್ಡ್, ರೇಷನ್ ಕಾರ್ಡ್ ಮತ್ತು ಚುನಾವಣೆ ಗುರುತಿನ ಚೀಟಿ ದಾಖಲಾತಿಗಳನ್ನು ಲಗತ್ತಿಸಬೇಕು.

ಅರ್ಹ ಅಭ್ಯರ್ಥಿಗಳ ದಾಖಲಾತಿಗಳನ್ನು ಧೃಡೀಕರಿಸಿ ನಿಗದಿತ ನಮೂನೆ ಅರ್ಜಿಗಳೊಂದಿಗೆ ಡಿಸೆಂಬರ್.31 ರ ಸಂಜೆ 4 ಗಂಟೆಯೊಳಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಅವಧಿ ಮೀರಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಅಲಬೂರು ಗ್ರಾಮ ಪಂಚಾಯಿತಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು ಕೊಟ್ಟೂರು ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯ ಆಯ್ಕೆ ಸಮಿತಿ ಮುಖಾಂತರ ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಕೊಟ್ಟೂರು ತಾಲೂಕಿನ ಎಂಆರ್‍ಡಬ್ಲೂ ಟಿ.ಲಕ್ಷ್ಮೀ, ಮೊ.8296859012 ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕಾರ್ಯಾಲಯ, ಆಗಾಪೆ ಎಜಿ ಪ್ರಾರ್ಥನಾಲಯ ಎದುರು ರಸ್ತೆ, ಡಿಸಿ ಸಿವಿಲ್ ಇಂಜಿನಿಯರ್ ಕಟ್ಟಡ, ಅಮರಾವತಿ ಹೊಸಪೇಟೆ, ಇವರನ್ನು ಕಚೇರಿ ಅವಧಿಯಲ್ಲಿ ಸಂಪರ್ಕಿಸಲು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande