ಭಾಗ್ಯನಗರ: ಬೀದಿಬದಿ ವ್ಯಾಪಾರಿಗಳಿಗೆ ಸೌಲಭ್ಯಗಳ ಅರಿವು
ಕೊಪ್ಪಳ, 18 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಜಿಲ್ಲಾ ಕೌಶಲಾಭಿವೃದ್ಧಿ, ಉದ್ಯಮಿಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ ಮತ್ತು ಭಾಗ್ಯನಗರ ಪಟ್ಟಣ ಪಂಚಾಯಿತಿ ಸಹಯೋಗದಲ್ಲಿ ಬುಧವಾರ ಭಾಗ್ಯನಗರ ಪಟ್ಟಣ ಪಂಚಾಯಿತ ವ್ಯಾಪ್ತಿಯಲ್ಲಿ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಹಾಗೂ
ಭಾಗ್ಯನಗರ: ಬೀದಿಬದಿ ವ್ಯಾಪಾರಿಗಳಿಗೆ ಸೌಲಭ್ಯಗಳ ಅರಿವು


ಕೊಪ್ಪಳ, 18 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಜಿಲ್ಲಾ ಕೌಶಲಾಭಿವೃದ್ಧಿ, ಉದ್ಯಮಿಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ ಮತ್ತು ಭಾಗ್ಯನಗರ ಪಟ್ಟಣ ಪಂಚಾಯಿತಿ ಸಹಯೋಗದಲ್ಲಿ ಬುಧವಾರ ಭಾಗ್ಯನಗರ ಪಟ್ಟಣ ಪಂಚಾಯಿತ ವ್ಯಾಪ್ತಿಯಲ್ಲಿ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಹಾಗೂ ಪ್ರಧಾನ ಮಂತ್ರಿ ಸ್ವ ನಿಧಿ ಯೋಜನೆ ಅಡಿಯಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಕಿರು ಸಾಲ ಸೌಲಭ್ಯ, ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ, ಪ್ರಧಾನಮಂತ್ರಿ ಸುರಕ್ಷಾ ಭೀಮಾ ಯೋಜನೆ, ಅಟಲ್ ಪೆನ್ಷನ್ ಯೋಜನೆಗಳ ಸೌಲಭ್ಯಗಳ ಕುರಿತು ಅರಿವು ಕಾರ್ಯಕ್ರಮ ನಡೆಯಿತು.

ಕೌಶಲ್ಯ ಅಭಿವೃದ್ಧಿ ಇಲಾಖೆಯ ನಲ್ಮ್ ಅಭಿಯಾನ ವ್ಯವಸ್ಥಾಪಕ ಅಹಮದ್ ಅವರು ಮಾತನಾಡಿ, ಬೀದಿಬದಿ ವ್ಯಾಪಾರಿಗಳಿಗೆ ಕಿರು ಸಾಲ ಸೌಲಭ್ಯ, ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ, ಪ್ರಧಾನಮಂತ್ರಿ ಸುರಕ್ಷಾ ಭೀಮಾ ಯೋಜನೆ, ಅಟಲ್ ಪೆನ್ಷನ್ ಯೋಜನೆಯಂತಹ ಕಾರ್ಯಕ್ರಮಗಳಡಿ ಸೌಲಭ್ಯಗಳಿದ್ದು, ಅರ್ಹ ಬೀದಿಬದಿ ವ್ಯಾಪಾರಿಗಳು ಅವುಗಳನ್ನು ಸದ್ಬಳಕೆ ಮಾಡಿಕೊಂಡು ಜೀವನ ಆರ್ಥಿಕ ಮಟ್ಟವನ್ನು ಸುಧಾರಿಸಿಕೊಳ್ಳಬೇಕು. ಈ ಎಲ್ಲಾ ಸೌಲಭ್ಯ ಪಡೆದು ಕೊಂಡು ನೀವೆಲ್ಲರೂ ಸಮಾಜದಲ್ಲಿ ಮುಖ್ಯವಾಹಿನಿಗೆ ಬರುತ್ತಾ ಬೇರೆಯವರಿಗೆ ಮಾದರಿಯಾಗಬೇಕೆಂದರು.

ಲೀಡ್ ಬ್ಯಾಂಕ್ ವ್ಯವಸ್ಥಾಪಕ ಮಾರುತಿ ಅವರು ಬೀದಿಬದಿ ವ್ಯಾಪಾರಿಗಳಿಗೆ ಕಿರು ಸಾಲ ಸೌಲಭ್ಯ, ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ, ಪ್ರಧಾನಮಂತ್ರಿ ಸುರಕ್ಷಾ ಭೀಮಾ ಯೋಜನೆ, ಅಟಲ್ ಪೆನ್ಷನ್ ಯೋಜನೆಗಳಿಗೆ ಸಂಬಂಧಿಸಿದಂತೆ ಬ್ಯಾಂಕ್ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.

ಭಾಗ್ಯನಗರ ಪಟ್ಟಣ ಪಂಚಾಯತ ಹಂಗಾಮಿ ಅಧ್ಯಕ್ಷರಾದ ಹೊನ್ನೂರ ಸಾಬ್ ಬೈರಾಪುರ ಅವರು ಕಾರ್ಯಕ್ರಮದ ಅಧ್ಯಕ್ಷ ವಹಿಸಿದ್ದರು. ಪ.ಪಂ ಮುಖ್ಯಾಧಿಕಾರಿ ಸುರೇಶ ಬಬಲಾದಿ ಅವರು ಪ್ರಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಪ.ಪಂ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶಿವರಾಜ್ ಹಾಗೂ ಇತರ ಸದಸ್ಯರು. ಎಸ್.ಬಿ.ಐ ಬ್ಯಾಂಕಿನ ವ್ಯವಸ್ಥಾಪಕರಾದ ಭವಾನಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande