ಬಿಜೆಪಿ ಕಚೇರಿಗೆ ಕಾಂಗ್ರೆಸ್‌ನಿಂದ ಮುತ್ತಿಗೆ ಯತ್ನ
ವಿಜಯಪುರ, 18 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ದ ಕೇಂದ್ರ ಸರ್ಕಾರದ ಪಿತೂರಿ ಆರೋಪ ಹಿನ್ನೆಲೆ ವಿಜಯಪುರ ನಗರದ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು. ಬಿಜೆಪಿ ಜಿಲ್ಲಾ ಕಚೇರಿಗೆ ಮುತ್ತಿಗೆ ಹಾಕ
ಕಾಂಗ್ರೆಸ್


ವಿಜಯಪುರ, 18 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ದ ಕೇಂದ್ರ ಸರ್ಕಾರದ ಪಿತೂರಿ ಆರೋಪ ಹಿನ್ನೆಲೆ ವಿಜಯಪುರ ನಗರದ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು.

ಬಿಜೆಪಿ ಜಿಲ್ಲಾ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿ ಪ್ರಧಾನಿ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲದೇ, ಈ ವೇಳೆ ಕಚೇರಿಗೆ ಮುತ್ತಿಗೆ ಹಾಕುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ತಡೆದರು. ಕಾರ್ಯಕರ್ತರನ್ನು ಬಂಧಿಸಿ ಪೊಲೀಸರು ಕೊಂಡೊಯ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande