
ಬಳ್ಳಾರಿ, 18 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ ಗ್ರಾಮೀಣ ಉಪ-ವಿಭಾಗ ಕಾರ್ಯ ಮತ್ತು ಪಾಲನಾ ಶಾಖೆ-1 ರ ವ್ಯಾಪ್ತಿಯ ಬರುವ ಎಲ್ಲಾ ವಿದ್ಯುತ್ ಗ್ರಾಹಕರಿಗೆ ವಿದ್ಯುತ್ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ಡಿ.20 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಕೊಳಗಲ್ಲು ಗ್ರಾಮದ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆ ಆಯೋಜಿಸಲಾಗಿದೆ.
ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಭೆಯಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬಹುದು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಮೋಹನಬಾಬು ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್