ಲೋಕ ಸಭೆಯಲ್ಲಿ ಸೆಕ್ಯುರಿಟೀಸ್ ಮಾರ್ಕೆಟ್ಸ್ ಕೋಡ್ ಮಸೂದೆ ಮಂಡನೆ
ನವದೆಹಲಿ, 18 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಲೋಕಸಭೆಯಲ್ಲಿ ಸೆಕ್ಯುರಿಟೀಸ್ ಮಾರ್ಕೆಟ್ಸ್ ಕೋಡ್ ಮಸೂದೆ, 2025 ಅನ್ನು ಮಂಡಿಸಿದರು. ಈ ಮಸೂದೆಯು ಸೆಕ್ಯುರಿಟೀಸ್ ಮಾರುಕಟ್ಟೆಗಳಿಗೆ ಸಂಬಂಧಿಸಿದ ಕಾನೂನುಗಳನ್ನು ಒಗ್ಗೂಡಿಸುವುದು ಹಾಗೂ ಅವುಗಳಿಗೆ ಸ
Sitaramanna


ನವದೆಹಲಿ, 18 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಲೋಕಸಭೆಯಲ್ಲಿ ಸೆಕ್ಯುರಿಟೀಸ್ ಮಾರ್ಕೆಟ್ಸ್ ಕೋಡ್ ಮಸೂದೆ, 2025 ಅನ್ನು ಮಂಡಿಸಿದರು.

ಈ ಮಸೂದೆಯು ಸೆಕ್ಯುರಿಟೀಸ್ ಮಾರುಕಟ್ಟೆಗಳಿಗೆ ಸಂಬಂಧಿಸಿದ ಕಾನೂನುಗಳನ್ನು ಒಗ್ಗೂಡಿಸುವುದು ಹಾಗೂ ಅವುಗಳಿಗೆ ಸಂಬಂಧಿಸಿದ ಮತ್ತು ಪ್ರಾಸಂಗಿಕ ವಿಷಯಗಳಲ್ಲಿ ತಿದ್ದುಪಡಿ ತರಲು ಉದ್ದೇಶಿಸಿದೆ.

ಲೋಕಸಭೆಯಲ್ಲಿ ಪರಿಚಯಿಸಲಾದ ಈ ಮಸೂದೆ, ಭಾರತದಲ್ಲಿ ಸೆಕ್ಯುರಿಟೀಸ್ ಮಾರುಕಟ್ಟೆ ನಿಯಂತ್ರಣಕ್ಕಾಗಿ ಏಕೀಕೃತ ಕಾನೂನು ಚೌಕಟ್ಟನ್ನು ರಚಿಸುವ ಗುರಿ ಹೊಂದಿದೆ. ಈ ಉದ್ದೇಶಕ್ಕಾಗಿ ಮೂರು ಅಸ್ತಿತ್ವದಲ್ಲಿರುವ ಪ್ರಮುಖ ಕಾನೂನುಗಳನ್ನು ರದ್ದುಗೊಳಿಸುವ ಪ್ರಸ್ತಾವನೆಯನ್ನು ಮಸೂದೆ ಒಳಗೊಂಡಿದೆ. ಅವುಗಳೆಂದರೆ – ಸೆಬಿ ಕಾಯಿದೆ, 1992; ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ ಕಾಯಿದೆ, 1996; ಹಾಗೂ ಸೆಕ್ಯುರಿಟೀಸ್ ಕಾಂಟ್ರಾಕ್ಟ್ಸ್ (ನಿಯಂತ್ರಣ) ಕಾಯಿದೆ, 1956.

ಪ್ರಸ್ತಾವಿತ ಸಂಹಿತೆಯು ನಿಯಂತ್ರಣ ಚೌಕಟ್ಟನ್ನು ಬಲಪಡಿಸುವುದು, ಹೂಡಿಕೆದಾರರ ರಕ್ಷಣೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿಸುವುದು ಹಾಗೂ ಬಂಡವಾಳ ಮಾರುಕಟ್ಟೆಗಳಲ್ಲಿ ವ್ಯವಹಾರ ಮಾಡುವ ದಕ್ಷತೆ ಮತ್ತು ಸುಲಭತೆಯನ್ನು ಹೆಚ್ಚಿಸುವುದನ್ನು ಗುರಿಯಾಗಿಸಿಕೊಂಡಿದೆ. ಈ ಮೂಲಕ ಸೆಕ್ಯುರಿಟೀಸ್ ಮಾರುಕಟ್ಟೆಗೆ ಸಂಬಂಧಿಸಿದ ಕಾನೂನುಗಳನ್ನು ಸಮಗ್ರವಾಗಿ ಕ್ರೋಢೀಕರಿಸಿ, ಅವುಗಳಲ್ಲಿ ಅಗತ್ಯ ತಿದ್ದುಪಡಿಗಳನ್ನು ತರಲು ಸರ್ಕಾರ ಉದ್ದೇಶಿಸಿದೆ.

ಸೆಕ್ಯುರಿಟೀಸ್ ಮಾರ್ಕೆಟ್ಸ್ ಕೋಡ್ ಬಿಲ್, 2025ರ ಪ್ರಕಾರ, ‘ಬೋರ್ಡ್’ ಎಂದು ಕರೆಯಲ್ಪಡುವ ಭಾರತೀಯ ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಬೋರ್ಡ್ (SEBI)ಯ ಅಧಿಕಾರಗಳು ಹಾಗೂ ಆಡಳಿತ ಚೌಕಟ್ಟನ್ನು ಬಲಪಡಿಸಲು ತತ್ವಾಧಾರಿತ ಕಾನೂನು ವಿಧಾನವನ್ನು ಅಳವಡಿಸಿಕೊಳ್ಳಲಾಗಿದೆ. ಅನಗತ್ಯ ಜಟಿಲತೆಗಳನ್ನು ನಿವಾರಿಸುವುದು ಮತ್ತು ನಿಯಂತ್ರಣದ ಸ್ಪಷ್ಟತೆಯನ್ನು ಹೆಚ್ಚಿಸುವ ಉದ್ದೇಶದಿಂದ ಕಾನೂನು ಭಾಷೆಯನ್ನು ಸರಳಗೊಳಿಸುವ ಪ್ರಸ್ತಾವವೂ ಈ ಮಸೂದೆಯಲ್ಲಿ ಅಡಕವಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande