ಡಿ.20 ರಂದು ಹೆಚ್.ಟಿ., ಇ.ಹೆಚ್.ಟಿ ವಿದ್ಯುತ್ ಗ್ರಾಹಕರ ಸಭೆ
ಬಳ್ಳಾರಿ, 18 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗದ ವ್ಯಾಪ್ತಿಗೆ ಬರುವ ನಗರ ಉಪ ವಿಭಾಗದ 1, 2 ರ ಎಲ್ಲಾ ಹೆಚ್.ಟಿ ಮತ್ತು ಇ.ಹೆಚ್.ಟಿ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆಯನ್ನು ಡಿ.20 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಹೆಚ್.ಆರ್ ಗವಿಯಪ್ಪ ವೃತ್ತದ ಬುಡಾ ಕಚೇರಿ ಹಿ
ಡಿ.20 ರಂದು ಹೆಚ್.ಟಿ., ಇ.ಹೆಚ್.ಟಿ ವಿದ್ಯುತ್ ಗ್ರಾಹಕರ ಸಭೆ


ಬಳ್ಳಾರಿ, 18 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗದ ವ್ಯಾಪ್ತಿಗೆ ಬರುವ ನಗರ ಉಪ ವಿಭಾಗದ 1, 2 ರ ಎಲ್ಲಾ ಹೆಚ್.ಟಿ ಮತ್ತು ಇ.ಹೆಚ್.ಟಿ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆಯನ್ನು ಡಿ.20 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಹೆಚ್.ಆರ್ ಗವಿಯಪ್ಪ ವೃತ್ತದ ಬುಡಾ ಕಚೇರಿ ಹಿಂಭಾಗದ ಜೆಸ್ಕಾಂ ವಲಯ ಕಚೇರಿಯ ಮೊದಲ ಮಹಡಿಯ ಸಭಾ ಭವನದಲ್ಲಿ ಆಯೋಜಿಸಲಾಗಿದೆ.

ಸಂಬಂಧಿತ ಬಳ್ಳಾರಿ ನಗರ ಜೆಸ್ಕಾಂ ಉಪ ವಿಭಾಗದ-1, 2 ರ ಎಲ್ಲಾ ಹೆಚ್.ಟಿ ಮತ್ತು ಇ.ಹೆಚ್.ಟಿ ವಿದ್ಯುತ್ ಗ್ರಾಹಕರು ಸಭೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande