
ಬೆಳಗಾವಿ, 18 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ದ್ವೇಷ ಭಾಷಣ ನಿಯಂತ್ರಣ ಮಸೂದೆ ಮೂಲಕ ಪ್ರತಿಪಕ್ಷಗಳ ಧ್ವನಿಯನ್ನು ಅಡಗಿಸಲು ಕಾಂಗ್ರೆಸ್ ಪಕ್ಷ ಯತ್ನಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಮಸೂದೆ ಕೇವಲ ರಾಜಕೀಯ ವಿರೋಧಿಗಳಿಗಷ್ಟೇ ಅಲ್ಲದೆ ಪತ್ರಕರ್ತರ ಸ್ವತಂತ್ರ ಧ್ವನಿಯ ಮೇಲೂ ನಿಯಂತ್ರಣ ಹೇರಲು ರೂಪಿಸಲಾಗಿದೆ ಎಂದು ಆರೋಪಿಸಿದರು.
ಸಾಮಾಜಿಕ ಜಾಲತಾಣಗಳಲ್ಲಿ ಯಾರಾದರೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರೂ ಅದನ್ನು ಹತ್ತಿಕ್ಕಿ, 7–8 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ದುಸ್ಸಾಹಸಕ್ಕೆ ಸರ್ಕಾರ ಮುಂದಾಗಿದೆ ಎಂದು ಅವರು ಆರೋಪಿಸಿದರು.
ಈ ಮಸೂದೆ ಪ್ರಜಾಪ್ರಭುತ್ವ ವಿರೋಧಿ ನಡೆ ಆಗಿದ್ದು, ಬಿಜೆಪಿ ಇದನ್ನು ತೀವ್ರವಾಗಿ ವಿರೋಧಿಸಲಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa