ಎಸ್‌ಸಿಪಿ ಹಾಗೂ ಟಿಎಸ್‌ಪಿ ಪ್ರಗತಿ ಪರಿಶೀಲನಾ ಸಭೆ
ಗದಗ, 18 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲಾಡಳಿತ ಭವನದಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್‌ಸಿಪಿ) ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆ (ಟಿಎಸ್‌ಪಿ)ಗಳ ಪ್ರಗತಿ ಪರಿಶೀಲನಾ ಸಭೆ ಜರುಗಿತು. ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಿವಿಧ ಇಲಾಖೆಗಳ ಅನುಷ್ಠಾ
ಫೋಟೋ


ಗದಗ, 18 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲಾಡಳಿತ ಭವನದಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್‌ಸಿಪಿ) ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆ (ಟಿಎಸ್‌ಪಿ)ಗಳ ಪ್ರಗತಿ ಪರಿಶೀಲನಾ ಸಭೆ ಜರುಗಿತು. ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಿವಿಧ ಇಲಾಖೆಗಳ ಅನುಷ್ಠಾನ ಪ್ರಗತಿಯನ್ನು ವಿವರವಾಗಿ ಪರಿಶೀಲಿಸಲಾಯಿತು.

ಸಭೆಯಲ್ಲಿ ಎಸ್‌ಸಿಪಿ/ಟಿಎಸ್‌ಪಿ ಯೋಜನೆಗಳಡಿ ನಿಗದಿತ ಗುರಿಗಳನ್ನು ಸಾಧಿಸುವಲ್ಲಿ ಕೆಲವು ಇಲಾಖೆಗಳು ಹಿಂದುಳಿದಿರುವುದು ಗಮನಕ್ಕೆ ಬಂದಿತು. ಈ ಹಿನ್ನೆಲೆಯಲ್ಲಿ ಪ್ರಗತಿ ಸಾಧಿಸದ ಸಂಬ0ಧಿತ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಯೋಜನೆಗಳ ಉದ್ದೇಶ ಕೇವಲ ಅನುದಾನ ವೆಚ್ಚವಲ್ಲ, ಬದಲಾಗಿ ಅರ್ಹ ಫಲಾನುಭವಿಗಳಿಗೆ ನೇರ ಲಾಭ ತಲುಪಿಸುವುದೇ ಮುಖ್ಯವೆಂದು ಅವರು ಸ್ಪಷ್ಟಪಡಿಸಿದರು.

ಅನುಷ್ಠಾನದಲ್ಲಿ ವಿಳಂಬ, ಗುರಿ ಸಾಧನೆ ಕೊರತೆ ಹಾಗೂ ವರದಿ ಸಲ್ಲಿಕೆಯಲ್ಲಿ ನಿರ್ಲಕ್ಷ÷್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಮುಂದಿನ ಸಭೆಯೊಳಗೆ ಬಾಕಿ ಉಳಿದ ಕಾಮಗಾರಿಗಳು ಹಾಗೂ ಫಲಾನುಭವಿ ಆಧಾರಿತ ಯೋಜನೆಗಳನ್ನು ಪೂರ್ಣಗೊಳಿಸಿ ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಿದರು.

ಮುಂದುವರೆದುಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಇಲಾಖೆಗಳ ಅನುಷ್ಟಾನಿತ ಕಾಮಗಾರಿಗಳ ಆರ್ಥಿಕ ಹಾಗೂ ಭೌತಿಕ ಗುರಿ ಸಾಧನೆಗೆ ಕ್ರಮ ವಹಿಸಬೇಕು. ಎಸ್‌ಸಿ ಎಸ್‌ಟಿ ಕಾಲೋನಿಯಲ್ಲಿ ಬೀದಿ ದೀಪ ಅಳವಡಿಕೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ವಿಳಂಬಮಾಡದೇ ಕೈಗೊಳ್ಳಬೇಕು. ಕಾಮಗಾರಿ ಕೈಗೊಳ್ಳುವಾಗ ಗುಣಮಟ್ಟದ ಕಾಯ್ದುಕೊಳ್ಳುವುದು ಹಾಗೂ ಫಲಾನುಭವಿಗಳ ಆಯ್ಕೆಯಲ್ಲಿ ಪಾರದರ್ಶಕತೆ ಮುಖ್ಯವಾಗಿದೆ. ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಸಭೆಗೆ ಹಾಜರಾಗಬೇಕು. ಆಯಾ ಆರ್ಥಿಕ ಸಾಲಿನಲ್ಲಿ ಅನುಷ್ಟಾನಿತ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವತ್ತ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು. ಯಾವುದೇ ಕಾರಣಕ್ಕೂ ಬಿಡುಗಡೆಯಾದ ಅನುದಾನ ಲ್ಯಾಪ್ಸ್ ಆಗದಂತೆ ನೋಡಿಕೊಳ್ಳಬೇಕು ಎಂದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ ಅವರು ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ವಿವಿಧ ಇಲಾಖೆಗಳು ಸಾಧಿಸಿದ ಪ್ರಗತಿ ವರದಿಯನ್ನು ಸಭೆಯಲ್ಲಿ ವಿವರಿಸಿದರು. ಸಭೆಯಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಯೋಜನಾ ಅನುಷ್ಠಾನ ಘಟಕದ ಪ್ರತಿನಿಧಿಗಳು ಉಪಸ್ಥಿತರಿದ್ದು, ಪ್ರಗತಿ ವೇಗ ಹೆಚ್ಚಿಸಲು ಅಗತ್ಯ ಕ್ರಮಗಳ ಕುರಿತು ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಜಿ.ಪಂ.ದ ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ, ಜಿ.ಪಂ. ಅಧಿಕಾರಿ ಎಂ.ವಿ.ಚಳಗೇರಿ, ಹಿಂದುಳಿದವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಎಂ.ಎಂ.ತುಂಬರಮಟ್ಟಿ, ಅಂಗವಿಕಲ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ ಮಹಾಂತೇಶ್ ಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಸವರಾಜ ಬಳ್ಳಾರಿ, ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ರಮೇಶ, ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ರಾಧಾ ಮಣ್ಣೂರ, ಕಾರ್ಮಿಕ ಇಲಾಖೆ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ, ಪಶು ಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ. ಎಚ್.ಬಿ.ಹುಲಗಣ್ಣವರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande