
ರಾಯಚೂರು, 18 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ವತಿಯಿಂದ 2025-26ನೇ ಸಾಲಿನಲ್ಲಿ ಪಿಎಮ್‍ಎನ್‍ಎಎಮ್ ಅಡಿಯಲ್ಲಿ ನಗರದ ಮಾಣಿಕ ನಗರ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಡಿಸೆಂಬರ್ 22ರ ಬೆಳಿಗ್ಗೆ 10 ಗಂಟೆಗೆ ಶಿಶಿಕ್ಷು ಮೇಳವನ್ನು ಆಯೋಜಿಸಲಾಗಿದೆ.
ಈ ಮೇಳದಲ್ಲಿ ರಾಜ್ಯದ ಹಾಗೂ ವಿವಿಧ ಜಿಲ್ಲೆಯ ಪ್ರತಿಷ್ಟಿತ ಕಂಪನಿಗಳ ಪ್ರತಿನಿಧಿಗಳು ಭಾಗವಹಿಸುತ್ತಿದ್ದು, ಶಿಶಿಕ್ಷು ತರಬೇತಿಗಾಗಿ ಅಭ್ಯರ್ಥಿಗಳನ್ನು ಆಯ್ಕೆಮಾಡಿಕೊಳ್ಳುತ್ತಿರುವುದರಿಂದ ಐಟಿಐ ದ್ವಿತೀಯ ವರ್ಷದಲ್ಲಿ ತರಬೇತಿ ಪಡೆಯುತ್ತಿರುವ ಹಾಗೂ ಈಗಾಗಲೇ ಐಟಿಐ ಉತ್ತೀರ್ಣರಾದ ತರಬೇತಿದಾರರು ಮತ್ತು ಪಿಯುಸಿ ಹಾಗೂ ಪದವಿಯಲ್ಲಿ ಉತ್ತೀರ್ಣರಾದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಈ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8904784507 ಅಥವಾ 9035064582ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಭೀಮಣ್ಣ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್