



ಹಗರಿಬೊಮ್ಮನಹಳ್ಳಿ, ಹೊಸಪೇಟೆ , 18 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಹೊಸಪೇಟೆಯ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಹಾಗೂ ಹಗರಿಬೊಮ್ಮನಹಳ್ಳಿ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಬುಧವಾರ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮೊಹಮ್ಮದ್ ಅಕ್ರಮ್ ಅಲಿ ಷಾ ಅವರು ಧೀಡಿರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಹೊಸಪೇಟೆಯ ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ಪರಿಶೀಲನೆ ವೇಳೆ ಸಮರ್ಪಕ ದಾಖಲಾತಿ ನಿರ್ವಹಣೆ ವೈಫಲ್ಯ ಕಂಡು ಹಾಸ್ಟೆಲ್ ವಾರ್ಡ್‍ನ್ ಭೀಮದಾಸ್ ಅವರಿಗೆ ಎಚ್ಚರಿಕೆ ನೀಡಿದರು. ಹಾಸ್ಟೆಲ್‍ನಲ್ಲಿ ಅಹಾರ ಸುರಕ್ಷತೆ ಮತ್ತು ಸ್ವಚ್ಛತೆಗೆ ಆದ್ಯತೆ ನೀಡಬೇಕು. ದಾಖಲಾತಿಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯತನ ವಹಿಸದಂತೆ ಸೂಚಿಸಿದರು.
ಹಗರಿಬೊಮ್ಮನಹಳ್ಳಿ ಪಟ್ಟಣದ ಚಿಂತ್ರಪಳ್ಳಿ ಗ್ರಾಮದ ಬಳಿಯಿರುವ ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿದ ವೇಳೆ ಅಡುಗೆ ಮನೆ, ಅಹಾರ ಸಂಗ್ರಹ ಕೊಠಡಿ ಸಹಿತ ಅಹಾರ ಧಾನ್ಯಗಳನ್ನು ಪರಿಶೀಲಿಸಲಾಯಿತು. ಹಾಸ್ಟೆಲ್ ನಿರ್ವಹಣೆ ಹಾಗೂ ಸ್ವಚ್ಛತೆ ಮತ್ತು ದಾಖಲಾತಿ ನಿರ್ವಹಣೆ ಕುರಿತು ವಾರ್ಡ್‍ನ್ ಗೀತಾರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಸರದ ಜತೆಗೆ ಉತ್ತಮ ವಾಸ್ತವ್ಯ ಮತ್ತು ಗುಣಮಟ್ಟದ ಅಹಾರ ವಿತರಣೆಗೆ ಕ್ರಮವಹಿಸಲು ಸಲಹೆ ನೀಡಿದರು.
ಈ ವೇಳೆ ಹೊಸಪೇಟೆಯಲ್ಲಿ ಜಿಪಂ ಸಹಾಯಕ ಯೋಜನಾಧಿಕಾರಿ ಉಮೇಶ್, ವಸತಿ ಮೇಲ್ವಿಚಾರಕ ಭೀಮದಾಸ್, ಹಗರಿಬೊಮ್ಮನಹಳ್ಳಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಜಗದೀಶ್, ವಸತಿ ಮೇಲ್ವಿಚಾರಕಿ ಎ.ಗೀತಾ ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್