
ಕುಡತಿನಿ, 19 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಕುಡತಿನಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಗುರುತಿಸಲಾಗಿರುವ ಸರ್ಕಾರಿ ಅಥವಾ ಖಾಸಗಿ ಸಂಸ್ಥೆಗಳ ಆವರಣದಲ್ಲಿರುವ ನಾಯಿಗಳು ಹಾಗೂ ಬೀದಿ ನಾಯಿಗಳನ್ನು ದತ್ತು ಪಡೆದುಕೊಳ್ಳುವ ಅವಕಾಶವಿದ್ದು, ಆಸಕ್ತ ಎನ್.ಜಿ.ಓ ಮತ್ತು ಇತರರು ಸ್ವಯಂ ಪ್ರೇರಣೆಯಿಂದ ದತ್ತುಪಡೆದುಕೊಳ್ಳಬಹುದಾಗಿದೆ.
ಆಸಕ್ತರಿದ್ದಲ್ಲಿ ಕುಡತಿನಿ ಪಟ್ಟಣ ಪಂಚಾಯಿತಿ ಕಾರ್ಯಾಲಯದ ವಿಷಯ ನಿರ್ವಾಹಕರನ್ನು ಸಂಪರ್ಕಿಸಬಹುದು ಎಂದು ಕುಡತಿನಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್