
ಹೊಸಪೇಟೆ, 19 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಡಿ.21 ರಿಂದ 24 ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪ್ರಯುಕ್ತ ಜಿಲ್ಲಾಡಳಿತ, ರೋಟರಿ ಕ್ಲಬ್, ಭಾರತೀಯ ವೈದ್ಯಕೀಯ ಸಂಘ, ವಿಶೇಷ ಚೇತನರ ಸಂಘಟನೆಗಳ ವೇದಿಕೆ, ಮಲ್ಲಿಗೆ ಪ್ಯಾರಾ ಮೆಡಿಕಲ್ ಕಾಲೇಜ್, ತುಂಗಭದ್ರ ಸ್ಕೂಲ್ ಆಫ್ ನಸಿರ್ಂಗ್ ಮತ್ತು ಟಿಎಂಇ ಸೊಸೈಟಿ ಆಫ್ ನಸಿರ್ಂಗ್ ಕಾಲೇಜ್ ಸಹಯೋಗದಲ್ಲಿ ಡಿ.20 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯ ಆವರಣದಲ್ಲಿ ರಾಷ್ಟ್ರೀಯ ಪೋಲಿಯೋ ಜಾಗೃತಿ ಜಾಥಾವನ್ನು ಹಮ್ಮಿಕೊಳಲಾಗಿದೆ.
ಜಾಗೃತಿ ಜಾಥಾವು ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಿಂದ ಆರಂಭಿಸಿ ಪುಣ್ಯಮೂರ್ತಿ ವೃತ್ತ, ಬಸ್ ನಿಲ್ದಾಣ, ಡಾ. ಪುನೀತ್ ರಾಜ್ ಕುಮಾರ್ ಸರ್ಕಲ್, ಅಂಬೇಡ್ಕರ್ ಸರ್ಕಲ್, ರಾಮಾ ಟಾಕೀಸ್, ಮಾರ್ಗವಾಗಿ ಮಸೀದಿ ಮಾರ್ಗದಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆವರೆಗೆ ಕೊನೆಗೊಳ್ಳಲಿದೆ ಎಂದು ಜಿಲ್ಲಾ ಆರೋಗ್ಯ ಕುಟುಂಬ ಮತ್ತು ಕಲ್ಯಾಣಾಧಿಕಾರಿ ಶಂಕರ್ ನಾಯ್ಕ್ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್