
ಕೊಪ್ಪಳ, 19 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಕೊಪ್ಪಳ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪೋಷಣ ಅಭಿಯಾನ ಯೋಜನೆಯಡಿ ಜಿಲ್ಲಾ ಮತ್ತು ತಾಲ್ಲೂಕು ಹಂತದಲ್ಲಿ ಗುತ್ತಿಗೆ ಆಧಾರದ 3 ಹುದ್ದೆಗೆ ಸ್ವೀಕೃತಗೊಂಡ ಅರ್ಜಿಗಳಿಗೆ ಆಕ್ಷೇಪಣೆಗೆ ಆಹ್ವಾನಿಸಲಾಗಿದೆ.
ಪೋಷಣ ಅಭಿಯಾನ ಯೋಜನೆಯಡಿ ಜಿಲ್ಲಾ ಮತ್ತು ತಾಲ್ಲೂಕು ಹಂತದಲ್ಲಿನ ಗುತ್ತಿಗೆ ಆಧಾರದ 3 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಈ 3 ಹುದ್ದೆಗಳಿಗೆ ಅರ್ಹ, ಅನರ್ಹ ಹಾಗೂ ತಾತ್ಕಾಲಿಕ ಆಯ್ಕೆಯಾದ ಅರ್ಜಿಗಳ ವಿವರಗಳನ್ನು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಛೇರಿಯ ಪ್ರದರ್ಶನಾ ಫಲಕದಲ್ಲಿ ಪ್ರದರ್ಶೀಸಲಾಗಿದೆ.
ಈ ಅರ್ಜಿಗಳ ಮಾಹಿತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಂದ ಯಾವುದಾದರೂ ಅಕ್ಷೇಪಣೆಗಳಿದ್ದಲ್ಲಿ ಡಿಸೆಂಬರ್ 24ರ ವರೆಗೆ ಸಮಯ ಅವಕಾಶ ನೀಡಲಾಗಿದ್ದು, ಆಕ್ಷೇಪಣೆ ಸಲ್ಲಿಸಬಹುದಾಗಿದೆ ಎಂದು ಕೊಪ್ಪಳ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್