ನಾಳೆ ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಮತ್ತು ಕಾಯ್ದೆಗಳ ಕಾರ್ಯಾಗಾರ
ಕೊಪ್ಪಳ, 19 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯಗಳು, ಬೆಂಗಳೂರು, ಕಂದಾಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾಡಳಿತ ಕೊಪ್ಪಳ ಇವರ ಸಹಯೋಗದೊಂದಿಗೆ ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಮತ್ತು ಸಂಬಂಧಿಸಿದ ಕಾಯ್ದೆಗಳ ಕುರಿತು ಒಂದು
ನಾಳೆ ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಮತ್ತು ಕಾಯ್ದೆಗಳ ಕಾರ್ಯಾಗಾರ


ಕೊಪ್ಪಳ, 19 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯಗಳು, ಬೆಂಗಳೂರು, ಕಂದಾಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾಡಳಿತ ಕೊಪ್ಪಳ ಇವರ ಸಹಯೋಗದೊಂದಿಗೆ ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಮತ್ತು ಸಂಬಂಧಿಸಿದ ಕಾಯ್ದೆಗಳ ಕುರಿತು ಒಂದು ದಿನದ ಕಾರ್ಯಾಗಾರವನ್ನು ಡಿ. 20 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ನಲ್ಲಿ ಆಯೋಜಿಸಲಾಗಿದೆ.

ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಪ್ರಭಾರ ಅಧ್ಯಕ್ಷರಾದ ಎನ್.ಎಸ್.ಪಾಟೀಲ ಅವರು ಕಾರ್ಯಾಗಾರ ಉದ್ಘಾಟಿಸುವರು. ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ್ ಬಿ. ಇಟ್ನಾಳ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರಾದ ಸಿ.ಚಂದ್ರಶೇಖರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್ ಅರಸಿದ್ದಿ ಅವರು ಉಪಸ್ಥಿತರಿರುವರು.

ಕಾರ್ಯಾಗಾರದ ಅಂಗವಾಗಿ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಕಂದಾಯ ಸದಸ್ಯರಾದ ಕೆ.ಹೆಚ್.ಅಶ್ವತ್ಥ ನಾರಾಯಣಗೌಡ ಅವರು ``ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ 2011ರ'' ಕುರಿತು, ಮತ್ತೋರ್ವ ಸದಸ್ಯರಾದ ಎಸ್.ಪಾಲಯ್ಯ ಅವರು ``ಕರ್ನಾಟಕ ಭೂ ಕಂದಾಯ ಅಧಿನಿಯಮ ಕಲಂ 192(ಎ) ಮತ್ತು ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ತಿದ್ದುಪಡಿ ಕಾಯ್ದೆ 2025ರ'' ಕುರಿತು ಉಪನ್ಯಾಸ ನೀಡುವರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ್ ಎಸ್. ದರಗದ್ ಅವರು ಕೆರೆ ಒತ್ತುವರಿ ಮತ್ತು ತೆರವುಗೊಳಿಸಲು ಇರುವ ಕಾನೂನು ಪ್ರಕ್ರಿಯೆಗಳ ಕುರಿತು, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ವಿಲೇಖನಾಧಿಕಾರಿ ಹೆಚ್.ಕೆ. ನವೀನ್ ಅವರು ಸ್ಥಳೀಯ ಸಂಸ್ಥೆಗಳು, ಅರಣ್ಯ ಇಲಾಖೆ, ಮುಜರಾಯಿ ಇಲಾಖೆ, ವಕ್ಸ್ ಆಸ್ತಿಗಳು ಒತ್ತುವರಿ ಮತ್ತು ತೆರವುಗೊಳಿಸಲು ಇರುವ ಕಾನೂನು ಪ್ರಕ್ರಿಯೆಗಳ ಕುರಿತು ಉಪನ್ಯಾಸ ನೀಡುವರು.

ಕಾರ್ಯಕ್ರಮದ ವಿವರ: ಕಾರ್ಯಾಗಾರದ ಅಂಗವಾಗಿ ಡಿ. 20ರ ಬೆಳಗ್ಗೆ 9.00 ರಿಂದ 9.50 ರವರೆಗೆ ನೋಂದಣಿ, ಬೆಳಿಗ್ಗೆ 10 ರಿಂದ 10.30ಕ್ಕೆ ಕಾರ್ಯಕ್ರಮ ಉದ್ಘಾಟನೆ, 10.30 ರಿಂದ 12.30 ಗಂಟೆಯವರೆಗೆ ಅಧಿವೇಶನಗಳು ಹಾಗೂ ಮಧ್ಯಾಹ್ನ 12.30 ರಿಂದ 1 ಗಂಟೆವರೆಗೆ ಚರ್ಚೆ ಮತ್ತು ವಿಮರ್ಶೆ ನಡೆಯಲಿದೆ ಎಂದು ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande