ಕನ್ನಡ ಭಾಷೆಯ ನಾಮಫಲಕ ಕಡ್ಡಾಯವಾಗಿ ಅಳವಡಿಸಿ : ನಾಗರಾಜ್ ಬೆಲ್ಲದ್
ಕೊಪ್ಪಳ, 19 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕೊಪ್ಪಳ ನಗರಸಭೆಯ ವ್ಯಾಪ್ತಿಯಲ್ಲಿನ ವಾಣಿಜ್ಯ ಮಳಿಗೆಗಳು, ಕೈಗಾರಿಕೆ, ಟ್ರಸ್ಟ್, ಆಸ್ಪತ್ರೆ, ಮನರಂಜನಾ ಕೇಂದ್ರ, ಹೋಟೆಲ್ ಸೇರಿದಂತೆ ಮತ್ತಿತರ ಕಡೆ ಕನ್ನಡ ಭಾಷೆಯ ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಕೊಪ್ಪಳ ನಗರಸಭೆಯ ಕಚೇರಿ ವ್ಯವಸ್ಥಾಪ
ಕೊಪ್ಪಳ : ಕನ್ನಡ ಭಾಷೆಯ ನಾಮಫಲಕ ಕಡ್ಡಾಯವಾಗಿ ಅಳವಡಿಸಿ : ನಾಗರಾಜ್ ಬೆಲ್ಲದ್ ಮನವಿ.


ಕೊಪ್ಪಳ, 19 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕೊಪ್ಪಳ ನಗರಸಭೆಯ ವ್ಯಾಪ್ತಿಯಲ್ಲಿನ ವಾಣಿಜ್ಯ ಮಳಿಗೆಗಳು, ಕೈಗಾರಿಕೆ, ಟ್ರಸ್ಟ್, ಆಸ್ಪತ್ರೆ, ಮನರಂಜನಾ ಕೇಂದ್ರ, ಹೋಟೆಲ್ ಸೇರಿದಂತೆ ಮತ್ತಿತರ ಕಡೆ ಕನ್ನಡ ಭಾಷೆಯ ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಕೊಪ್ಪಳ ನಗರಸಭೆಯ ಕಚೇರಿ ವ್ಯವಸ್ಥಾಪಕ ಮುನಿಸ್ವಾಮಿ ಅವರಿಗೆ ಸಾಮಾಜಿಕ ಹೋರಾಟಗಾರ ನಾಗರಾಜ್ ಬೆಲ್ಲದ್ ಶುಕ್ರವಾರ ಮನವಿ ಸಲ್ಲಿಸಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಾನ್ಯ ಸಚಿವರು ಬೆಳಗಾಂವಿ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿ ತಿಳಿಸಿರುವಂತೆ ರಾಜ್ಯಾದ್ಯಂತ ಕಡ್ಡಾಯವಾಗಿ ಒಂದು ತಿಂಗಳ ಅವಧಿಯಲ್ಲಿ ಕನ್ನಡ ನಾಮಫಲಕಗಳನ್ನು ಅಳವಡಿಸಲು ಅನುಷ್ಟಾನ ಮಾಡಲು ತಿಳಿಸಿರುತ್ತಾರೆ ಅದರಂತೆ ಕೊಪ್ಪಳ ನಗರಸಭೆಯ ವ್ಯಾಪ್ತಿಯಲ್ಲಿ ಬಹುತೇಕ ಕಡೆಗಳಲ್ಲಿ ಕನ್ನಡ ನಾಮಫಲಕ ಅಳವಡಿಸದೇ ಇರುವುದು ಕಂಡುಬರುತ್ತಿದೆ, ಆದ್ದರಿಂದ ಕೊಪ್ಪಳ ನಗರಸಭೆಯ ವ್ಯಾಪ್ತಿಯಲ್ಲಿನ ಎಲ್ಲಾ ವಾಣಿಜ್ಯ ಮಳಿಗೆಗಳು ಸೇರಿದಂತೆ ನಗರದ ಎಲ್ಲಾಕಡೆ ಈ ಕೂಡಲೆ ಕನ್ನಡ ಭಾಷೆಯ ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು, ಕನ್ನಡ ಭಾಷೆಯ ನಾಮಫಲಕಗಳನ್ನು ಅಳವಡಿಸದೆ ಇರುವವರ ಉದ್ಯಮ ಪರವಾನಗಿಯನ್ನು ರದ್ದುಪಡಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande