ಅಧಿಕಾರಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ : ಎಸ್ಪಿ
ಕೊಪ್ಪಳ, 19 ಡಿಸೆಂಬರ್ (ಹಿ.ಸ.) : ಆ್ಯಂಕರ್ : 2026ರ ಜನವರಿ 1 ರಿಂದ 8 ರವರೆಗೆ ನಡೆಯಲಿರುವ ಶ್ರೀ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಅಧಿಕಾರಿಗಳು ತಮಗೆ ನೀಡಿದ ಕೆಲಸಗಳನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅ
ಅಧಿಕಾರಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ : ಎಸ್ಪಿ.


ಕೊಪ್ಪಳ, 19 ಡಿಸೆಂಬರ್ (ಹಿ.ಸ.) :

ಆ್ಯಂಕರ್ : 2026ರ ಜನವರಿ 1 ರಿಂದ 8 ರವರೆಗೆ ನಡೆಯಲಿರುವ ಶ್ರೀ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಅಧಿಕಾರಿಗಳು ತಮಗೆ ನೀಡಿದ ಕೆಲಸಗಳನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಅವರು ಹೇಳಿದ್ದಾರೆ.

ಅವರು ಶುಕ್ರವಾರ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಛೇರಿ ಸಭಾಂಗಣದಲ್ಲಿ 2026 ರ ಜನೆವರಿ 1 ರಿಂದ 8 ರವರೆಗೆ ನಡೆಯಲಿರುವ ಶ್ರೀ ಗವಿಸಿದ್ದೇಶ್ವರ ಜಾತ್ರೆಯ ಹಿನ್ನೆಲೆ ಸಂಚಾರ ದಟ್ಟಣೆ ಮತ್ತು ಜನ ಜಂಗುಳಿ ನಿಯಂತ್ರಣ ಕುರಿತು ಮುಂಜಾಗ್ರತೆವಹಿಸಲು ಇಲಾಖೆ ಅಧಿಕಾರಿಗಳಿಗೆ ಕರೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.

ಕಮಿಟಿಯವರಿಗೆ ನೀಡಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಮತ್ತು ಕಾನೂನು ಸುವ್ಯವಸ್ಥೆಗೆ ಯಾವುದೇ ರೀತಿಯಲ್ಲಿ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ವಿಶೇಷವಾಗಿ ಜೆಸ್ಕಾಂ, ಆರೋಗ್ಯ ಮತ್ತು ಸಾರಿಗೆ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳ ಜವಾಬ್ದಾರಿ ಬಹಳ ಇದೆ. ಜಾತ್ರೆಯಲ್ಲಿ ಜನರಿಗೆ ಯಾವುದೇ ರೀತಿಯಲ್ಲಿ ಆರೋಗ್ಯ ಸಮಸ್ಯೆಗಳಾದರೆ ತಕ್ಷಣ ಅವರಿಗೆ ಚಿಕಿತ್ಸೆ ನೀಡಲು ಮೆಡಿಕಲ್ ಟೀಂನವರು ರಡಿಯಾಗಿರಬೇಕು. ಊಟ ಮತ್ತು ತೇರು ಹಾಗೂ ಇತರೆ ನಿಗದಿಪಡಿಸಿದ ಸ್ಥಳಗಳಲ್ಲಿ ಅಗ್ನಿಶಾಮಕ ವಾಹನಗಳನ್ನು ಮುಂಜಾಗ್ರತೆಯಾಗಿ ನಿಲ್ಲಿಸಬೇಕು ಎಂದರು.

ನಗರಸಭೆ ವತಿಯಿಂದ ಎಲ್ಲಾ ಕಡೆ ಸ್ವಚ್ಚತೆ ಮಾಡಬೇಕು. ಜೆಸ್ಕಾಂನವರು ವಿದ್ಯುತ್ ಸಮಸ್ಯೆಗಳಾಗದಂತೆ ನೋಡಿಕೊಳ್ಳಬೇಕು. ಆಹಾರ ಸುರಕ್ಷಿತೆಯ ಅಧಿಕಾರಿಗಳು ಪುಡ್ ಸೇಪ್ಟಿಕಡೆಗೆ ನಿಗಾವಹಿಸಬೇಕು. ಟ್ರಾಫಿಕ್ ಸಮಸ್ಯೆಗಳಾಗದಂತೆ ವಾಹನಗಳನ್ನು ಎಲ್ಲಿ ನಿಲ್ಲಿಸಬೇಕು ಮತ್ತು ಎಲ್ಲಿಂದ ಹೋಗಬೇಕು ಎನ್ನುವ ಕುರಿತು ಮುಂಚಿತವಾಗಿ ಈಗಲೇ ಸ್ಥಳ ಪರಿಶೀಲನೆ ಮಾಡಬೇಕು ಮತ್ತು ಇದರ ಮಾಹಿತಿಯನ್ನು ವಾಹನಗಳು ಯಾವ ಮಾರ್ಗದಲ್ಲಿ ಸಂಚರಿಸುತ್ತವೆ ಎನ್ನುವ ಕುರಿತು ಸಾರ್ವಜನಿಕರಿಗೆ ಮಾಧ್ಯಮಗಳ ಮೂಲಕ ಮಾಹಿತಿ ನೀಡಬೇಕೆಂದರು.

ಅಧಿಕಾರಿಗಳು ಯಾವುದೇ ಲ್ಯಾಪ್ಸಗಳಾಗದಂತೆ ನೋಡಿಕೊಳ್ಳಬೇಕು. ಎಲ್ಲಾ ಕಡೆ ಸಿಸಿಟಿವಿ ಅಳವಡಿಸುವುದರ ಜೊತೆಗೆ ಹೆಚ್ಚಿನ ಸಂಖ್ಯೆಯಲ್ಲಿ ವಾಚ ಟವರಗಳನ್ನು ಮಾಡಲಾಗುತ್ತಿದೆ. ಪ್ರತಿವರ್ಷ ಜನರು ಹೆಚ್ಚಿನ ಸಂಖ್ಯೆಯಲ್ಲಿ ಜಾತ್ರೆಗೆ ಬರುವುದರಿಂದ ಅವರಿಗೆ ಯಾವುದೇ ಸಮಸ್ಯೆಗಳಾಗದಂತೆ ಮುಂಜಾಗ್ರತೆಯಾಗಿ ಸೂಕ್ತ ಪೊಲೀಸ್ ಬಂದೋಬಸ್ತ ನೀಡಲಾಗುತ್ತಿದೆ. ನಮ್ಕಿಂದ ತಮಗೆ ಏನಾದರೂ ಸಹಾಯ ಬೇಕಾದರೂ ನಮಗೆ ತಿಳಿಸಿ ಎಲ್ಲರೂ ಸೇರಿ ಶ್ರೀ ಗವಿಸಿದ್ದೇಶ್ವರ ಜಾತ್ರೆಯನ್ನು ಒಳ್ಳೆಯ ರೀತಿಯಲ್ಲಿ ಆಚರಣೆ ಮಾಡೋಣ ಎಂದು ಹೇಳಿದರು.

ಈ ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೆಶಕರಾದ ಮಂಜುನಾಥ ಗುಂಡೂರ್, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಜಿಲ್ಲಾ ಅಂಕಿತ ಅಧಿಕಾರಿ ಡಾ. ಅಲಕಾನಂದ ಮಳಗಿ, ಅಬಕಾರಿ ಉಪ ಆಯುಕ್ತರಾದ ಕೆ.ಪ್ರಶಾಂತ ಕುಮಾರ, ಕೊಪ್ಪಳ ನಗರಸಭೆ ಪೌರಾಯುಕ್ತರಾದ ವೆಂಕಟೇಶ ನಾಗನೂರ, ಕಲ್ಯಾಣ ಕರ್ನಾಟಕ ಸಾರಿಗೆ ನಿಮಗದ ವಿಭಾಗೀಯ ಅಧಿಕಾರಿ ಪಿ.ಪರಮೇಶ್ವರಪ್ಪ, ಆಹಾರ ಸುರಕ್ಷಿತೆ ಅಧಿಕಾರಿ ಕೃಷ್ಣ ರಾಠೋಡ ಸೇರಿದಂತೆ ಇತರೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande