ಏಡ್ಸ್ ಕುರಿತ ಜಾಗೃತಿ ಜಾಥಾಗೆ ನ್ಯಾಯಾಧೀಶರಿಂದ ಚಾಲನೆ
ಏಡ್ಸ್ ಕುರಿತ ಜಾಗೃತಿ ಜಾಥಾಗೆ ನ್ಯಾಯಾಧೀಶರಿಂದ ಚಾಲನೆ
ಚಿತ್ರ;ಕೋಲಾರದಲ್ಲಿ ವಿಶ್ವ ಏಡ್ಸ್ ದಿನದ ಅಂಗವಾಗಿ ಜಿಲ್ಲಾದ್ಯಂತ ಅರಿವು ಮೂಡಿಸುವ ಉದ್ದೇಶದಿಂದ ಜಾಥಾ ಕಾರ್ಯಾಕ್ರಮಕ್ಕೆ ನ್ಯಾಯಾಧೀಶರಾದ ಆರ್.ನಟೇಶ್ ಚಾಲನೆ ನೀಡಿದರು. ಪ್ರಸನ್ನ ಕುಮಾರ್, ಆರೋಗ್ಯ ಶಿಕ್ಷಣಾಧಿಕಾರಿ ಪ್ರೇಮ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


ಕೋಲಾರ,೦೧ ಡಿಸೆಂಬರ್(ಹಿ.ಸ) :

ಆ್ಯಂಕರ್ : ನಗರದ ಪ್ರವಾಸಿ ಮಂದಿರದಿಂದ ಹಮ್ಮಿಕೊಳ್ಳಲಾಗಿದ್ದ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಕೋಲಾರ ಜಿಲ್ಲೆ ಇವರ ಸಹಯೋಗದಲ್ಲಿ ವಿಶ್ವ ಏಡ್ಸ್ ದಿನದ ಅಂಗವಾಗಿ ಜಿಲ್ಲಾದ್ಯಂತ ಅರಿವು ಮೂಡಿಸುವ ಉದ್ದೇಶದಿಂದ ಜಾಥಾ ಕಾರ್ಯಾಕ್ರಮಕ್ಕೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಜಿ.ಎ. ಮಂಜುನಾಥ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಏಡ್ಸ್ ಮಾರಿಯಿಂದ ಜನತೆ ಮುಕ್ತವಾಗಲು ಅರಿವು ಮೂಡಿಸಿ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಈ ಕುರಿತು ಜಾಗೃತಿ ಮೂಡುವಂತೆ ಮಾಡಿ, ಹೆಚ್‌ಐವಿ ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಿ ಎಂದರು.

ಇದೇ ಸಂದರ್ಭದಲ್ಲಿ ಏಡ್ಸ್ ತಡೆಗಟ್ಟಲು ವಹಿಸಬೇಕಾದ ಜಾಗೃತಿ ಕುರಿತು ಭಿತ್ತಿ ಪತ್ರಗಳನ್ನು ಬಿಡಗಡೆ ಮಾಡಲಾಯಿತು.

ಜಾಥಾ ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆರ್.ನಟೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಜಿ.ಶ್ರೀನಿವಾಸ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಉಪಸ್ಥಿತರಿದ್ದರು.

ಚಿತ್ರ : ಕೋಲಾರದಲ್ಲಿ ವಿಶ್ವ ಏಡ್ಸ್ ದಿನದ ಅಂಗವಾಗಿ ಜಿಲ್ಲಾದ್ಯಂತ ಅರಿವು ಮೂಡಿಸುವ ಉದ್ದೇಶದಿಂದ ಜಾಥಾ ಕಾರ್ಯಾಕ್ರಮಕ್ಕೆ ನ್ಯಾಯಾಧೀಶರಾದ ಆರ್.ನಟೇಶ್ ಚಾಲನೆ ನೀಡಿದರು. ಪ್ರಸನ್ನ ಕುಮಾರ್, ಆರೋಗ್ಯ ಶಿಕ್ಷಣಾಧಿಕಾರಿ ಪ್ರೇಮ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande