
ಗದಗ, 02 ಡಿಸೆಂಬರ್ (ಹಿ.ಸ.) :
ಆ್ಯಂಕರ್ : 2025-26 ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಧರ್ತಿ ಆಭಾ ಜನ ಜಾತಿಯ ಗ್ರಾಮ ಉತ್ಕರ್ಷ ಅಭಿಯಾನ ಕಾರ್ಯಕ್ರಮದಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ ಮಾಡಲಾಗಿದೆ.
ಪರಿಶಿಷ್ಟ ಪಂಗಡ ಸಮುದಾಯಕ್ಕೆ ಸೇರಿದ ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಅಸೂಟಿ ಗ್ರಾಮ ಪಂಚಾಯತ ವ್ಯಾಪ್ತಿಯ ಮೇಲ್ಮಟ ಲಕ್ಷ್ಮೇಶ್ವರ ತಾಲ್ಲೂಕಿನ ಗೋವನಾಳ ಗ್ರಾಮದ ಪಂಚಾಯತ ವ್ಯಾಪ್ತಿಯ ವಡೇಯರ ಮಲ್ಲಾಪೂರ, ಶಿರಹಟ್ಟಿ ತಾಲ್ಲೂಕಿನ ಮಾಚೇನಗಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಭಾವನೂರ ಹಾಗೂ ಮುಂಡರಗಿ ತಾಲ್ಲೂಕಿನ ಹಾರೋಗೇರಿ ಗ್ರಾಮ ಪಂಚಾಯತ ವ್ಯಾಪ್ತಿಯ ಕೇಲೂರ ಗ್ರಾಮದ ಮೀನುಗಾರರಿಗೆ ಮಾತ್ರ ಅನ್ವಯಿಸುವಂತೆ ಮೀನು ಮಾರಾಟಕ್ಕಾಗಿ ಐಸ್ ಬಾಕ್ಸ್ ನೊಂದಿಗೆ ದ್ವಿಚಕ್ರ ವಾಹನ ಖರೀದಿಗೆ ಸಹಾಯಧನ ನೀಡಲು ಗದಗ ಜಿಲ್ಲೆಗೆ ದ್ವಿಚಕ್ರ ವಾಹನ 01 ಗುರಿ ನಿಗದಿಪಡಿಸಿದೆ.
ಅರ್ಜಿಯನ್ನು ಡಿಸೆಂಬರ್ 20 ರೊಳಗಾಗಿ ಸಂಬಂಧಿಸಿದ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರು ಕಛೇರಿಯಲ್ಲಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ರೋಣ ತಾಲ್ಲೂಕಿನ ಮೀನುಗಾರರು ಮೀನುಗಾರಿಕೆ ಸಹಾಯಕ ನಿರ್ದೇಶಕರು, ಗದಗ ಮೊ.ಸಂ. (8095792530) ಹಾಗೂ ಲಕ್ಷ್ಮೇಶ್ವರ ಶಿರಹಟ್ಟಿ ಹಾಗೂ ಮುಂಡರಗಿ ತಾಲ್ಲೂಕಿನ ಮೀನುಗಾರರು ಮೀನುಗಾರಿಕೆ ಸಹಾಯಕ ನಿರ್ದೇಶಕರು, ಮುಂಡರಗಿ ರವರನ್ನು (8095792530) ಸಂಪರ್ಕಿಸಬಹುದಾಗಿದೆ.
ಹಿಂದೂಸ್ತಾನ್ ಸಮಾಚಾರ್ / lalita MP