
ಬೆಂಗಳೂರು, 02 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಉತ್ತಮ ಆಡಳಿತ ಮತ್ತು ಕಾಂಗ್ರೆಸ್‌ನ ಅಭಿವೃದ್ಧಿ ದೃಷ್ಟಿಕೋನದ ಬದ್ಧತೆಯನ್ನು ಪುನರುಚ್ಚರಿಸುವ ನಿಟ್ಟಿನಲ್ಲಿ, ತಮ್ಮ ನಿವಾಸದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಶೇಷ ಉಪಾಹಾರ ಕೂಟವನ್ನು ಆಯೋಜಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಾಮಾಜಿಕ ಜಾಲತಾಣ ಎಕ್ಸನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಅಧಿಕಾರ ಹಸ್ತಾಂತರ ಕುರಿತು ಇತ್ತೀಚಿನ ವಿದ್ಯಮಾನಗಳ ಹಿನ್ನೆಲೆಯಲ್ಲಿ ಇಬ್ಬರೂ ನಾಯಕರು ಪರಸ್ಪರ ಭೇಟಿಯಾಗಿ ಗೊಂದಲ ಪರಿಹರಿಸಿಕೊಳ್ಳಲು ಹೈಕಮಾಂಡ್ ಸೂಚನೆ ಮೇರೆಗೆ ಕಳೆದ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಮುಖ್ಯಮಂತ್ರಿ ನಿವಾಸದಲ್ಲಿ ಉಪಹಾರ ಕೂಟ ನಡೆಸಿದ್ದರು.
ಇಂದು ಮಾಜಿ ಸಂಸದ ಡಿ.ಕೆ.ಸುರೇಶ ಹಾಗೂ ಶಾಸಕ ರಂಗನಾಥ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa