
ಬೆಂಗಳೂರು, 02 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಡಿ.6 ರಂದು ಹಾಸನದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಇಂದು ಜಿಲ್ಲಾಡಳಿತದಿಂದ ಆಹ್ವಾನಿಸಲಾಯಿತು.
ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ, ರಾಜ್ಯ ಗೃಹ ಮಂಡಳಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಎಂ. ಶಿವಲಿಂಗೇಗೌಡ, ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಖುದ್ದು ಆಹ್ವಾನ ಪತ್ರಿಕೆ ನೀಡಿ ಆಹ್ವಾನಿಸಿದರು.
ಈ ವೇಳೆ ವಿಧಾನ ಪರಿಷತ್ ಮಾಜಿ ಸದಸ್ಯರಾದ ಎಂ.ಎ. ಗೋಪಾಲಸ್ವಾಮಿ, ಉಪ ವಿಭಾಗಾಧಿಕಾರಿ ಜಗದೀಶ್ ಗಂಗಣ್ಣನವರ್ ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa