
ಹುಬ್ಬಳ್ಳಿ, 2 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಮಕ್ಕಳ ಕಲಿಕೆಗೆ ಪಾಲಕರು, ಪೋಷಕರು ಪ್ರೋತ್ಸಾಹ ನೀಡಬೇಕಾಗುತ್ತದೆ. ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಪಾಲಕರ, ಪೋಷಕರ ಸಹಕಾರ ಅಗತ್ಯವಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ. ಆರ್.ಜೆ ಹೇಳಿದರು.
ಹುಬ್ಬಳ್ಳಿ ಘಂಟಿಕೇರಿಯ ಅಂಜುಮನ್ ಸಂಸ್ಥೆಯ ನೆಹರು ಕಾಲೇಜ್ ಆಡಿಟೋರಿಯಂನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಬದಲಾವಣೆಯ ಶಿಕ್ಷಣ; ಭವಿಷ್ಯದ ನಿರ್ಮಾಣ 2025-26 ಧಾರವಾಡ ಜಿಲ್ಲೆಯ ಉರ್ದು ಮಾಧ್ಯಮದ ಪ್ರೌಢಶಾಲಾ ಮುಖ್ಯ ಶಿಕ್ಷಕರು, ಎಸ್.ಡಿ.ಎಂ.ಸಿ. ಅಧ್ಯಕ್ಷರು, ಆಡಳಿತ ಮಂಡಳಿ ಅಧ್ಯಕ್ಷರು ಹಾಗೂ ಅಲ್ಪಸಂಖ್ಯಾತರ ವರ್ಗದ ಸಮುದಾಯದ ಪ್ರತಿನಿಧಿಗಳಿಗೆ ಶೈಕ್ಷಣಿಕ ಬಲವರ್ಧನ ಕಾರ್ಯಾಗಾರ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಳಕ್ಕೆ ಸಮುದಾಯದ ಸಹಭಾಗಿತ್ವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಉತ್ತಮ ಫಲಿತಾಂಶ ದಾಖಲಿಸುವ ಗುರಿಯನ್ನು ಹೊಂದಲಾಗಿದೆ. ಆ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣವನ್ನು ಮಕ್ಕಳಿಗೆ ನೀಡುವುದು ಶಿಕ್ಷಕರ ಜವಾಬ್ದಾರಿಯಾಗಿದೆ. ಶಿಕ್ಷಕರೊಂದಿಗೆ ಪಾಲಕರು ಮತ್ತು ಪೋಷಕರು ಮಕ್ಕಳಿಗೆ ಅಧ್ಯಯನದಲ್ಲಿ ಪ್ರೋತ್ಸಾಹ ನೀಡುವುದು ಅವಶ್ಯವಿದೆ. ಮಕ್ಕಳನ್ನು ಶಿಕ್ಷಣದ ಮೂಲಕ ಸಮಾಜದಲ್ಲಿ ಮುಂದೆ ತರಬಹುದು. ಪಾಲಕರು ಜವಾಬ್ದಾರಿಯನ್ನು ಅರಿತು ಜಿಲ್ಲಾಡಳಿತದೊಂದಿಗೆ ಕೈ ಜೋಡಿಸಿ, ಎಸ್ಎಸ್ಎಲ್‌ಸಿ ಫಲಿತಾಂಶ ಸುಧಾರಣೆಗೆ ಪಣ ತೊಡಬೇಕು. ಕಳೆದ ಆರು ತಿಂಗಳಿನಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ಜಿಲ್ಲಾಡಳಿತಕ್ಕೆ ವಿವಿಧ ಸಂಘ-ಸಂಸ್ಥೆಗಳು ಸಹಾಯ ಹಸ್ತವನ್ನು ನೀಡುತ್ತಿವೆ ಎಂದು ಅವರು ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa