ನಾಳೆ ಜಿಲ್ಲಾಡಳಿತದಿಂದ ವಿಶ್ವ ವಿಕಲಚೇತನರ ದಿನಾಚರಣೆ
ವಿಜಯಪುರ, 02 ಡಿಸೆಂಬರ್ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವ
ನಾಳೆ ಜಿಲ್ಲಾಡಳಿತದಿಂದ ವಿಶ್ವ ವಿಕಲಚೇತನರ ದಿನಾಚರಣೆ


ವಿಜಯಪುರ, 02 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಡಿಸೆಂಬರ್ 3ರಂದು ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ ಆಚರಿಸಲಾಗುತ್ತಿದೆ. ಈ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 8.30ಕ್ಕೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಕಂದಗಲ್ ಶ್ರೀ ಹನುಮಂತರಾಯ ರಂಗ ಮಂದಿರದವರೆಗೆ ಇಂಧನ ಚಾಲಿತ ತ್ರಿಚಕ್ರವಾಹನಗಳ ಜಾಥಾ ನಡೆಯಲಿದೆ.

ಅಂದು ಬೆಳಿಗ್ಗೆ 10.30ಕ್ಕೆ ಕಂದಗಲ್ ಶ್ರೀ ಹನುಮಂತರಾಯ ರಂಗಮ0ದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವರು ಕಾರ್ಯಮದ ಉದ್ಘಾಟನೆ ನೆರವೇರಿಸಲಿದ್ದಾರೆ. ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್. ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಲಕ್ಷಿö್ಮÃ ಹೆಬ್ಬಾಳ್ಕರ್ ಅವರು ಗೌರವ ಉಪಸ್ಥಿತರಿರಲಿದ್ದಾರೆ.

ನಗರ ಶಾಸಕರಾದ ಬಸನಗೌಡ ಆರ್. ಪಾಟೀಲ ಯತ್ನಾಳ ಅವರು ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ರವಿಕುಮಾರ ಎನ್, ವಿಧಾನ ಪರಿಷತ್‌ನ ಶಾಸಕರೂ ಆದ ನವದೆಹಲಿಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ-2 ಪ್ರಕಾಶ ಬಿ.ಹುಕ್ಕೇರಿ, ಶಾಸಕರು ಹಾಗೂ ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತದ ಅಧ್ಯಕ್ಷರಾದ ಅಪ್ಪಾಜಿ ಸಿ.ಎಸ್.ನಾಡಗೌಡ, ಸಂಸದರಾದ ರಮೇಶ ಜಿಗಜಿಣಗಿ, ಸುಧಾ ಮೂರ್ತಿ, ಶಾಸಕರಾದ ಯಶವಂತರಾಯಗೌಡ ವ್ಹಿ ಪಾಟೀಲ, ಹಣಮಂತ ಆರ್.ನಿರಾಣಿ, ಸುನೀಲಗೌಡ ಪಾಟೀಲ, ಪಿ.ಎಚ್.ಪೂಜಾರ, ವಿಠ್ಠಲ ಧೋಂಡಿಬಾ ಕಟಕಧೋಂಡ, ಭೀಮನಗೌಡ (ರಾಜುಗೌಡ) ಬಸನಗೌಡ ಪಾಟೀಲ, ಅಶೋಕ ಮಲ್ಲಪ್ಪ ಮನಗೂಳಿ, ಕೇಶವ ಪ್ರಸಾದ ಎಸ್, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷರಾದ ಕಾಂತಾ ನಾಯ್ಕ, ಧಾರವಾಡದ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ, ಮಹಾಪೌರರಾದ ಮಡಿವಾಳಪ್ಪ ಸಿದ್ದರಾಮಪ್ಪ ಕರಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕನಾನ್ ಅಬ್ದುಲ್ ಹಮೀದ ಮುಶ್ರೀಫ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಇಲಿಯಾಸ ಬೋರಾಮಣಿ ಅವರು ಭಾಗವಹಿಸಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆಯ ಇ-ಆಡಳಿತ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಉಜ್ವಲ ಕುಮಾರ ಘೋಷ, ಜಿಲ್ಲಾಧಿಕಾರಿ ಡಾ.ಆನಂದ.ಕೆ, ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷö್ಮಣ ನಿಂಬರಗಿ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಎಸ್. ಹಾಗರಗಿ, ವಿಜಯಪುರದ ಉಪವಿಭಾಗಾಧಿಕಾರಿ ಗುರುನಾಥ ಎಸ್. ದಡ್ಡೆ ಹಾಗೂ ಇಂಡಿಯ ಉಪವಿಭಾಗಾಧಿಕಾರಿ ಅನುರಾಧಾ ವಸ್ತçದ ಅವರು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande