
ಬೆಂಗಳೂರು, 02 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ಆರ್.ವಿ. ದೇವರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಡಿಸೆಂಬರ್ 3ರಂದು ಜನ್ಮದಿನದ ಅಂಗವಾಗಿ ಚಾಮುಂಡಿಬೆಟ್ಟಕ್ಕೆ ತೆರಳಿದ ಸಂದರ್ಭದಲ್ಲಿ ಅವರಿಗೆ ಹಠಾತ್ ಹೃದಯಾಘಾತ ಸಂಭವಿಸಿತು. ತಕ್ಷಣ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗದಲ್ಲೇ ಕೊನೆಯುಸಿರೆಳೆದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa