ಹನುಮಮಾಲಾ ವಿಸರ್ಜನೆ : ಜಿಲ್ಲಾಡಳಿತದಿಂದ ವ್ಯವಸ್ಥಿತ ಕ್ರಮ
ಕೊಪ್ಪಳ, 02 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಶ್ರೀರಾಮ ಭಕ್ತ ಹನುಮನ (ಶ್ರೀ ಆಂಜನೇಯ ಸ್ವಾಮಿ) ಜನ್ಮಸ್ಥಳವಾದ ಅಂಜನಾದ್ರಿ ಬೆಟ್ಟದಲ್ಲಿ ಮಂಗಳವಾರ ವಿಶೇಷ ಸಂಭ್ರಮ ಮನೆ ಮಾಡಿರುವುದು ಕಂಡುಬಂದಿತು. ಸ್ರಹಸ್ರಾರು ಸಂಖ್ಯೆಯ ಹನುಮ ಮಾಲಾಧಾರಿಗಳು, ಭಕ್ತಾಧಿಗಳು ತಂಡೋಪ ತಂಡವಾಗಿ ಆಗಮಿಸುತ್ತಿದ್ದು, ಹನುಮಮಾಲಾ
ಹನುಮಮಾಲಾ ವಿಸರ್ಜನೆ : ಜಿಲ್ಲಾಡಳಿತದಿಂದ ವ್ಯವಸ್ಥಿತ ಕ್ರಮ


ಹನುಮಮಾಲಾ ವಿಸರ್ಜನೆ : ಜಿಲ್ಲಾಡಳಿತದಿಂದ ವ್ಯವಸ್ಥಿತ ಕ್ರಮ


ಹನುಮಮಾಲಾ ವಿಸರ್ಜನೆ : ಜಿಲ್ಲಾಡಳಿತದಿಂದ ವ್ಯವಸ್ಥಿತ ಕ್ರಮ


ಕೊಪ್ಪಳ, 02 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಶ್ರೀರಾಮ ಭಕ್ತ ಹನುಮನ (ಶ್ರೀ ಆಂಜನೇಯ ಸ್ವಾಮಿ) ಜನ್ಮಸ್ಥಳವಾದ ಅಂಜನಾದ್ರಿ ಬೆಟ್ಟದಲ್ಲಿ ಮಂಗಳವಾರ ವಿಶೇಷ ಸಂಭ್ರಮ ಮನೆ ಮಾಡಿರುವುದು ಕಂಡುಬಂದಿತು. ಸ್ರಹಸ್ರಾರು ಸಂಖ್ಯೆಯ ಹನುಮ ಮಾಲಾಧಾರಿಗಳು, ಭಕ್ತಾಧಿಗಳು ತಂಡೋಪ ತಂಡವಾಗಿ ಆಗಮಿಸುತ್ತಿದ್ದು, ಹನುಮಮಾಲಾ ವಿಸರ್ಜನೆ ಕಾರ್ಯಕ್ರಮಕ್ಕೆ ಕೊಪ್ಪಳ ಜಿಲ್ಲಾಡಳಿತದಿಂದ ವ್ಯವಸ್ಥಿತ ಕ್ರಮ ಕೈಗೊಳ್ಳಲಾಗಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ (ಚಿಕ್ಕರಾಂಪುರ) ಗ್ರಾಮದಲ್ಲಿರುವ ಅಂಜನಾದ್ರಿ ಬೆಟ್ಟದಲ್ಲಿ ಪ್ರತಿವರ್ಷದಂತೆ ಈ ವರ್ಷ ನಡೆಯುತ್ತಿರುವ ಹನುಮಮಾಲಾ ವಿಸರ್ಜನೆ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳು ಸೇರಿದಂತೆ ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದ ರಾಜ್ಯದಿಂದಲೂ ಹನುಮ ಮಾಲಾಧಾರಿಗಳು, ದ್ವಿಚಕ್ರ ಮತ್ತು ನಾಲ್ಕು ಚಕ್ರ ವಾಹನಗಳು, ಬಸ್ ಹಾಗೂ ಕಾಲ್ನಡಿಗೆ ಮೂಲಕ ಅಂಜನಾದ್ರಿಗೆ ಆಗಮಿಸುತ್ತಿದ್ದಾರೆ. ಮಾಲಾಧಾರಿಗಳಿ ಮತ್ತು ಭಕ್ತರಿಗಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ವತಿಯಿಂದ ಅಂಜನಾದ್ರಿಯಲ್ಲಿ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ.

ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಿಂದ ವಿಶೇಷ ಪೂಜೆ: ಹನುಮಾಲಾ ಕಾರ್ಯಕ್ರಮದ ಪ್ರಯುಕ್ತ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಮಂಗಳವಾರ ಅಂಜನಾದ್ರಿಗೆ ಭೇಟಿ ನೀಡಿ, ಪಾದಗಟ್ಟಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಸಚಿವರು, ಶಾಸಕರು ಮತ್ತು ಇತರೆ ಅಧಿಕಾರಿಗಳೊಂದಿಗೆ ವೇದ ಪಾಠಶಾಲೆಗೆ ತೆರಳಿ ಅಲ್ಲಿನ ಪ್ರಸಾದ ಸ್ಥಳಕ್ಕೆ ಭೇಟಿ ನೀಡಿ, ಪ್ರಸಾದ ಸಿದ್ಧತೆಗಳನ್ನು ಪರಿಶೀಲಿಸಿ, ಭಕ್ತರಿಗೆ ಖುದ್ದಾಗಿ ಪ್ರಸಾದ ಸೇವೆ ಸಲ್ಲಿಸಿದರು. ಬಳಿಕ ಪ್ರಸಾದವನ್ನು ಸ್ವೀಕರಿಸಿದರು.

ನಂತರ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಹನುಮಮಾಲಾ ವಿಸರ್ಜನಾ ಕಾರ್ಯಕ್ರಮಕ್ಕಾಗಿ ಎಲ್ಲಾ ಸಿದ್ಧತೆಗಳನ್ನು ಕೊಪ್ಪಳ ಜಿಲ್ಲಾಡಳಿತವು ವ್ಯವಸ್ಥಿತವಾಗಿ ಕೈಗೊಂಡಿದ್ದು, 18 ರಿಂದ 20 ಸಮಿತಿಗಳನ್ನು ರಚಿಸಿ, ಅವುಗಳಿಗೆ ಜವಾಬ್ದಾರಿ ಹಂಚಿಕೆ ಮಾಡಿ ಎಲ್ಲಾ ಕೆಲಸಗಳು ಸುಗಮವಾಗಿ ನಡೆಯುತ್ತಿವೆ. ಮಂಗಳವಾರ ಬೆಳಿಗ್ಗೆಯಿಂದಲೇ ಹನುಮಮಾಲಾಧಾರಿಗಳು ಅಂಜನಾದ್ರಿಗೆ ಆಗಮಿಸುತ್ತಿದ್ದಾರೆ. ಬುಧವಾರವೂ ಹೆಚ್ಚಿನ ಸಂಖ್ಯೆಯಲ್ಲಿ ಮಾಲಾಧಾರಿಗಳು ಬರುವ ನಿರೀಕ್ಷೆಯಿದೆ. ಹಾಗಾಗಿ ಹನುಮ ಮಾಲಾಧಾರಿಗಳು ಮತ್ತು ಭಕ್ತಾಧಿಗಳಿಗಾಗಿ ಕುಡಿಯುವ ನೀರು, ಊಟದ ವ್ಯವಸ್ಥೆ, ಸ್ನಾನದ ವ್ಯವಸ್ಥೆ, ಪಾಕಿರ್ಂಗ್ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ ಎಂದು ಹೇಳಿದರು.

ಶಾಸಕರಿಂದ ವಿಶೇಷ ಪೂಜೆ: ಹನುಮಾಲೆ ಧರಿಸಿ ಅಂಜನಾದ್ರಿಗೆ ಆಗಮಿಸಿದ ಗಂಗಾವತಿ ಶಾಸಕರಾದ ಜಿ.ಜನಾರ್ಧನರೆಡ್ಡಿ ಅವರು ಕಾರ್ಯಕ್ರಮದ ವ್ಯವಸ್ಥೆಯನ್ನು ಪರಿಶೀಲಿಸಿ, ಅಂಜನಾದ್ರಿ ಬೆಟ್ಟದ ಪಾದಗಟ್ಟಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹನುಮಮಾಲ ವಿಸರ್ಜನೆಗಾಗಿ ಕಳೆದ ವರ್ಷಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಮಾಲಾಧಾರಿಗಳು ಈ ವರ್ಷ ಆಗಮಿಸುತ್ತಿದ್ದಾರೆ. ಭಕ್ತಾಧಿಗಳಿಗಾಗಿ ಕುಡಿಯುವ ನೀರಿನ ವ್ಯವಸ್ಥೆ, ಸ್ನಾನದ ವ್ಯವಸ್ಥೆ, ಪ್ರಸಾದ, ದೇವಸ್ಥಾನದಲ್ಲಿ ದರ್ಶನಕ್ಕೆ ವ್ಯವಸ್ಥೆ, ಪೊಲೀಸ್ ಭದ್ರತೆ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಜಿಲ್ಲಾಡಳಿತದಿಂದ ಮಾಡಲಾಗಿರುತ್ತದೆ.

ಈ ಬಾರಿ ವಿಶೇಷವಾಗಿ ಅಂಜನಾದ್ರಿ ಬೆಟ್ಟದಿಂದ ಸುಮಾರು ಎರಡು ಕಿ.ಮೀ ವ್ಯಾಪ್ತಿಯಲ್ಲಿ ರಾಮನಾಮ ಸ್ಮರಣೆಗಾಗಿ ಧ್ವನಿವರ್ಧಕಗಳನ್ನು ಅಳವಡಿಸಲಾಗಿದೆ. ಸುಗಮ ವಾಹನ ಸಂಚಾರಕ್ಕಾಗಿ ಶಾಶ್ವತ ಪರಿಹಾರ ಕಂಡುಕೊಳ್ಳುವ ದೃಷ್ಠಿಯಿಂದ ಬೈಪಾಸ್ ರಸ್ತೆಗಾಗಿ 6 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು. ಹನುಮಮಾಲಾಧಾರಿಗಳು ಮತ್ತು ಭಕ್ತಾಧಿಗಳ ಆರೋಗ್ಯದ ಹಿತದೃಷ್ಠಿಯಿಂದ ಆರೋಗ್ಯ ಇಲಾಖೆಯವರು ಒಟ್ಟು 7 ವೈದ್ಯರ ತಂಡವನ್ನು ರಚಿಸಿದ್ದು, ಅವುಗಳು ದಿನದ 24 ಗಂಟೆಗಳ ಸರತಿ ಪಾಳೆಯದಲ್ಲಿ ಕಾರ್ಯ ನಿರ್ವಹಿಸುವ ವ್ಯವಸ್ಥೆಯನ್ನು ಚೆನ್ನಾಗಿ ಮಾಡಿದ್ದಾರೆ. ಬುಧವಾರ ಗಂಗಾವತಿ ನಗರದಿಂದ ಸಂಕೀರ್ತನಾ ಯಾತ್ರೆ ನಡೆಯಲಿದ್ದು, ಇದಕ್ಕೂ ಸಹ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.

ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಮಾತನಾಡಿ, ಹನುಮಮಲಾ ವಿಸರ್ಜನಾ ಕಾರ್ಯಕ್ರಮಕ್ಕೆ ಆಗಮಿಸುವಂತಹ ಮಾಲಾಧಾರಿಗಳಿಗೆ ಮತ್ತು ಭಕ್ತಾಧಿಗಳಿಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯ, ಪಾರ್ಕಿಂಗ್, ಭದ್ರತಾ ಸುವ್ಯವಸ್ಥೆ ಸೇರಿದಂತೆ ಇತರೆ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಇದರ ಜೊತೆಗೆ ಜನರಿಗೆ ದೇವರ ದರ್ಶನ ಮತ್ತು ಪ್ರಸಾದ ವ್ಯವಸ್ಥೆಗೆ ತೊಂದರೆಯಾಗದಂತೆ ಕ್ರಮ ವಹಿಸಲಾಗಿದೆ. ಪಾದಗಟ್ಟಿ ಮತ್ತು ಬೆಟ್ಟದ ಕೆಳಗೆ ಎಲ್.ಇ.ಡಿ ವಾಲ್‍ಗಳನ್ನು ಅಳವಡಿಸಲಾಗಿದೆ. ದೇವಸ್ಥಾನಕ್ಕೆ ಆಗಮಿಸುವ ಭಕ್ತಾಧಿಗಳ ಸಂಖ್ಯೆಯನ್ನು ಅರಿಯಲು ಹೆಡ್ ಕೌಂಟಿಂಗ್ ಮಷಿನ್ ಅಳವಡಿಸಲಾಗಿದೆ ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್. ಅರಸಿದ್ದಿ ಅವರು ಮಾತನಾಡಿ, ಅಂಜನಾದ್ರಿ ಹನುಮಮಾಲಾ ಕಾರ್ಯಕ್ರಮ ನಿಮಿತ್ತ ಗಂಗಾವತಿ ಟೌನ್ ವ್ಯಾಪ್ತಿಯಲ್ಲಿ ಟ್ರಾಫಿಕ್ ಕಂಟ್ರೋಲ್ ಹಾಗೂ ಅಂಜನಾದ್ರಿಯಲ್ಲಿ ಜನರಿಗೆ ಯಾವುದೇ ರೀತಿಯ ಸಮಸ್ಯೆಗಳಾಗದಂತೆ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸುವ ಮೂಲಕ ಜಿಲ್ಲಾ ಪೊಲೀಸ್ ಇಲಾಖೆಯು ಕ್ರಮ ಕೈಗೊಂಡಿದೆ ಎಂದರು.

ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಸಹಾಯಕ ಆಯುಕ್ತರಾದ ಕ್ಯಾ. ಮಹೇಶ್ ಮಾಲಗಿತ್ತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಮಂಜುನಾಥ ಗುಂಡೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಟಿ. ಲಿಂಗರಾಜು, ಪ್ರವಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ನಾಗರಾಜ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ, ಗಂಗಾವತಿ ತಹಶಿಲ್ದಾರ ಯು. ನಾಗರಾಜ, ಕಾರಟಗಿ ತಹಶೀಲ್ದಾರ ವಿಶ್ವನಾಥ ಮುರಡಿ ಸೇರಿದಂತೆ ಹಲವು ಜನಪ್ರತಿನಿಧಿಗಳು ಹಾಗೂ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಅಂಜನಾದ್ರಿಯಲ್ಲಿ ಹನುಮ ಮಾಲಾಧಾರಿಗಳು: ಅಂಜನಾದ್ರಿಯ ಬೆಟ್ಟದ ಮೇಲಿನ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಮತ್ತು ಪಾದಗಟ್ಟೆಯಲ್ಲಿ ವಿವಿಧ ಬಣ್ಣ ಬಣ್ಣಗಳ ಹೂಗಳಿಂದ ಶ್ರೀ ಆಂಜನೇಯ ಸ್ವಾಮಿ ಮೂರ್ತಿಯನ್ನು ವಿಶೇಷ ರೀತಿಯಲ್ಲಿ ಅಲಂಕರಿಸಲಾಗಿದೆ. ಪೂಜೆ ಪುನಸ್ಕಾರಗಳು ಅದ್ದೂರಿಯಾಗಿ ನಡೆಯುತ್ತಿವೆ.

ಬೆಟ್ಟದ ಮೇಲೆ ಹಾಗೂ ಬೆಟ್ಟ ಹತ್ತುವ ಮಾರ್ಗದಲ್ಲಿಯೂ ಸಹ ಹೂಗಳು ಮತ್ತು ವಿದ್ಯುತ್ ಬಣ್ಣ ಬಣ್ಣದ ದೀಪಗಳಿಂದ ಅಲಂಕಾರ ಮಾಡಲಾಗಿದೆ. ಅಂಜನಾದ್ರಿಯತ್ತ ಹನುಮ ಮಾಲಾಧಾರಿಗಳು ತಂಡೊಪ ತಂಡವಾಗಿ ಆಗಮಿಸುತ್ತಿರುವುದು ರಸ್ತೆಗಳಲ್ಲಿ ಕಂಡುಬರುತ್ತಿದೆ. ಮಾರ್ಗ ಮಧ್ಯದ ಗ್ರಾಮಗಳಲ್ಲಿ ಹನುಮ ಮಾಲಾಧಾರಿಗಳಿಗೆ ಪ್ರಸಾದ ಹಾಗೂ ತಂಗಲು ವ್ಯವಸ್ಥೆ ಮಾಡಲಾಗಿದೆ. ಭಕ್ತರು ಜೈ ಶ್ರೀರಾಮ್, ಜೈ ಹನುಮಾನ, ಜೈ ಭಜರಂಗಬಲಿ ಎಂಬ ಘೋಷಣೆಗಳನ್ನು ಹಾಕುತ್ತ ಅಂಜನಾದ್ರಿಯತ್ತ ಸಾಗುತ್ತಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande