
ಹಾಸನ, 02 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಹಾಸನ ಮಹಾನಗರಪಾಲಿಕೆ ವ್ಯಾಪ್ತಿಗೆ ಬರುವ ಹಾಸನ ಜಿಲ್ಲಾ ನ್ಯಾಯಾಲಯದ ಸಂಕೀರ್ಣದ ಎದುರು ಇರುವ ವೃತ್ತಕ್ಕೆ ಅಪ್ರತಿಮ ದೇಶಪ್ರೇಮಿ ಸಂಗೊಳ್ಳಿ ರಾಯಣ್ಣ ವೃತ್ತ ಎಂದು ನಾಮಕರಣ ಪ್ರತಿಷ್ಠಾಪಿಸಲು ದಿನಾಂಕ 18-04-2025 ರಂದು ಹಾಸನ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಗಿರುತ್ತದೆ. ಅದರಂತೆ ಸದರಿ ವಿಷಯದ ಬಗ್ಗೆ ಸಾರ್ವಜನಿಕರಿಂದ ಯಾವುದಾದರೂ ಆಕ್ಷೇಪಣೆ,ಸಲಹೆ,ಸೂಚನೆಗಳು ಇದ್ದಲ್ಲಿ 30 ದಿನಗಳೊಳಗಾಗಿ ಈ ಕಚೇರಿಗೆ ವರದಿ ಸಲ್ಲಿಸಲು
ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa