
ರಾಯಚೂರು, 02 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಬಿ.ಎಡ್‍ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿಯಿಂದ ಮಾನ್ಯತೆ ಪಡೆದಿರುವ ಸರ್ಕಾರಿ/ಅರೆ ಸರ್ಕಾರಿ/ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿರುವ (ಮುಸ್ಲಿಂ ಕ್ರಿಶ್ಚಿಯನ್,ಜೈನ್ ಸಿಖ್,ಬೌದ್ದ್ ಹಾಗೂ ಪಾರ್ಸಿ) ವಿದ್ಯಾರ್ಥಿಗಳಿಗೆ 25000 ರೂ.ಗಳ ವಿಶೇಷ ಪ್ರೋತ್ಸಾಹಧನ ಸಂಬಂಧಪಟ್ಟ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಡಿಬಿಟಿ ಮುಖಾಂತರ ಜಮಾ ಮಾಡಲಾಗುವುದು.
ಈ ಬಿ.ಎಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ಅರ್ಹ ವಿದ್ಯಾರ್ಥಿಗಳಿಗೆ ಸೇವಾ ಸಿಂಧು ಪೋರ್ಟಲ್ ಆನ್‍ಲೈನ್‍ನಲ್ಲಿ https://sevasindhu.karnataka.gov.in ನಲ್ಲಿ ಡಿಸೆಂಬರ್ 31ರೊಳಗಾಗಿ ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ:- 8277799990 ಹಾಗೂ ಇಲಾಖಾ ವೆಬ್ ಸೈಟ್ ವಿಳಾಸ: https://dom.karnataka.gov.in ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಕೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್