
ಬಳ್ಳಾರಿ (ಕುಡತಿನಿ), 02 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಕುಡತಿನಿ ಗ್ರಾಮದ ವೀರಶೈವ ಸಮಾಜದ ಮುಖಂಡರು, ಬಿಜೆಪಿ ಪಕ್ಷದ ಮುಖಂಡರು ಹಾಗೂ ವೀರಶೈವ ವಿದ್ಯಾವರ್ಧಕ ಸಂಘದ ಮಾಜಿ ಉಪಾಧ್ಯಕ್ಷರಾಗಿದ್ದ ಪಲ್ಲೇದ ಜಗದೀಶಪ್ಪ (72) ಅವರು ಹೃದಯಾಘಾತದಿಂದ ಮಂಗಳವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಮೃತರಿಗೆ ಪತ್ನಿ, ಮಗ - ಮಗಳು, ಇದ್ದಾರೆ.
ಮೃತರ ಅಂತ್ಯಕ್ರಿಯೆಯು ಕುಡತಿನಿ ಗ್ರಾಮದ ರುದ್ರಭೂಮಿಯಲ್ಲಿ ಬುಧವಾರ ಮಧ್ಯಾಹ್ನ 1 ಗಂಟೆಯ ನಂತರ ವೀರಶೈವ ವಿಧಿ ಸಂಪ್ರದಾಯಗಳ ಪ್ರಕಾರ - ಗುರು - ಹಿರಿಯರ ಸಮ್ಮುಖದಲ್ಲಿ ನೆರವೇರಲಿದೆ.
ಮೃತರ ಆತ್ಮಕ್ಕೆ ಶಾಂತಿ ಕೋರಿ ವೀರಶೈವ ವಿದ್ಯಾವರ್ಧಕ ಸಂಘದ ಪದಾಧಿಕಾರಿಗಳು, ಆಜೀವ ಸದಸ್ಯರು, ಜನಪ್ರತಿನಿಧಿಗಳು ಮತ್ತು ಗಣ್ಯಮಾನ್ಯರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ವಿವರಗಳಿಗಾಗಿ ಪಲ್ಲೇದ ಪ್ರಭು, ಮೊಬೈಲ್ ಸಂಖ್ಯೆ ; 94810 33333 ಗೆ ಕರೆ ಮಾಡಿರಿ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್