
ಬಳ್ಳಾರಿ, 02 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್.ಲಾಡ್ ಅವರು ಡಿಸೆಂಬರ್ 03 ರಂದು ಬಳ್ಳಾರಿಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಡಿ.03 ರಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟು, ಬೆಳಿಗ್ಗೆ 10.15 ಕ್ಕೆ ಬಳ್ಳಾರಿಯ ತೋರಣಗಲ್ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಬಳಿಕ ಸಂಡೂರು ತಾಲ್ಲೂಕಿನ ವಿಠಲಾಪುರ ಗ್ರಾಮದಲ್ಲಿ ಏರ್ಪಡಿಸಿರುವ ಸಂಡೂರು ಸಂಕಲ್ಪ ಸಮರ್ಪಣಾ ಸಮಾವೇಶ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಸಂಜೆ 05 ಗಂಟೆಗೆ ತೋರಣಗಲ್ಲಿನ ಜಿಂದಾಲ್ ಏರ್‍ಸ್ಟ್ರಿಪ್ ಗೆ ಆಗಮಿಸಿ, ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್