ಲೋಕ ಸಭೆ ಕಲಾಪ ನಾಳೆಗೆ ಮುಂದೂಡಿಕೆ
ನವದೆಹಲಿ, 02 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಸಂಸತ್ತಿನ ಚಳಿಗಾಲದ ಅಧಿವೇಶನದ ಎರಡನೇ ದಿನವಾದ ಮಂಗಳವಾರ, ಎರಡು ಬಾರಿ ಅಡ್ಡಿಪಡಿಸಿದ ನಂತರ ಲೋಕ ಸಭೆಯು ಮಧ್ಯಾಹ್ನ 2 ಗಂಟೆಗೆ ಕಲಾಪವನ್ನು ಪುನರಾರಂಭಿಸಿತು, ಆದರೆ ಕೇವಲ ಐದು ನಿಮಿಷಗಳಲ್ಲಿ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿ
LS adjourned


ನವದೆಹಲಿ, 02 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಸಂಸತ್ತಿನ ಚಳಿಗಾಲದ ಅಧಿವೇಶನದ ಎರಡನೇ ದಿನವಾದ ಮಂಗಳವಾರ, ಎರಡು ಬಾರಿ ಅಡ್ಡಿಪಡಿಸಿದ ನಂತರ ಲೋಕ ಸಭೆಯು ಮಧ್ಯಾಹ್ನ 2 ಗಂಟೆಗೆ ಕಲಾಪವನ್ನು ಪುನರಾರಂಭಿಸಿತು, ಆದರೆ ಕೇವಲ ಐದು ನಿಮಿಷಗಳಲ್ಲಿ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಚರ್ಚೆಗೆ ಒತ್ತಾಯಿಸಿ ಪ್ರತಿಪಕ್ಷಗಳು ಘೋಷಣೆಗಳು ಮತ್ತು ಗದ್ದಲದ ಕಾರಣ ಕಲಾಪವನ್ನು ಬುಧವಾರದವರೆಗೆ ಮುಂದೂಡಲಾಯಿತು.

ಪ್ರತಿಪಕ್ಷದ ಸದಸ್ಯರು ಸಭಾಧ್ಯಕ್ಷರ ಪೀಠದ ಮುಂಭಾಗ ಘೋಷಣೆಗಳನ್ನು ಹಾಕಲು ಪ್ರಾರಂಭಿಸಿದರು. ಇದು ಸದನದ ಸುಗಮ ಕಲಾಪಕ್ಕೆ ಅಡ್ಡಿಪಡಿಸಿತು. ಸಭಾಧ್ಯಕ್ಷ ದಿಲೀಪ್ ಸೈಕಿಯಾ ಪ್ರತಿ ಪಕ್ಷದ ಸದಸ್ಯರಿಗೆ ಶಾಂತವಾಗಿ ಕುಳಿತು ಸದನದ ವಿಷಯದ ಬಗ್ಗೆ ಚರ್ಚಿಸಲು ಅವಕಾಶ ನೀಡುವಂತೆ ಮನವಿ ಮಾಡಿದರು. ಆದರೆ ಪ್ರತಿ ಪಕ್ಷಗಳ ಸಹಕಾರ ದೊರೆಯದ ಹಿನ್ನೆಲೆಯಲ್ಲಿ ಕಲಾಪವನ್ನು ನಾಳೆಗೆ ಮುಂದೂಡಲಾಯಿತು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande