ಮದ್ದೂರು ರಸ್ತೆ ಅಗಲೀಕರಣ : ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ
ಬೆಂಗಳೂರು, 02 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಟಿ.ಬಿ. ವೃತ್ತದಿಂದ ಕೊಲ್ಲಿ ವೃತ್ತದವರೆಗೆ ರಸ್ತೆ ಅಗಲೀಕರಣ ಕಾರ್ಯದ ಬಗ್ಗೆ ಪ್ರಮುಖ ನಿರ್ಧಾರ ಕೈಗೊಳ್ಳುವ ನಿಟ್ಟಿನಲ್ಲಿ ಇಂದು ವಿಧಾನ ಸೌಧದಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ನಡೆಯಿತು. 2025–26ನೇ ಸಾಲಿ
Meeting


ಬೆಂಗಳೂರು, 02 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಟಿ.ಬಿ. ವೃತ್ತದಿಂದ ಕೊಲ್ಲಿ ವೃತ್ತದವರೆಗೆ ರಸ್ತೆ ಅಗಲೀಕರಣ ಕಾರ್ಯದ ಬಗ್ಗೆ ಪ್ರಮುಖ ನಿರ್ಧಾರ ಕೈಗೊಳ್ಳುವ ನಿಟ್ಟಿನಲ್ಲಿ ಇಂದು ವಿಧಾನ ಸೌಧದಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ನಡೆಯಿತು.

2025–26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಮದ್ದೂರು ನಗರದಲ್ಲಿ ರಸ್ತೆ ಅಗಲೀಕರಣಕ್ಕಾಗಿ ವಿಸ್ತೃತ ಯೋಜನಾ ವರದಿಯನ್ನು ಲೋಕೋಪಯೋಗಿ ಇಲಾಖೆಯಿಂದ ಸಭೆಯಲ್ಲಿ ಪರಿಶೀಲನೆಗೆ ಮಂಡಿಸಲಾಯಿತು.

ಮದ್ದೂರು ಪಟ್ಟಣದ ಟಿ.ಬಿ. ವೃತ್ತ–ಕೊಲ್ಲಿ ವೃತ್ತದ ನಡುವಿನ ಪ್ರಮುಖ ಜಿಲ್ಲಾಮಟ್ಟದ ರಸ್ತೆ ಜನನಿಬಿಡ ಹಾಗೂ ವ್ಯಾಪಾರಿಕ ಚಟುವಟಿಕೆಯುಳ್ಳ ಪ್ರದೇಶವಾಗಿರುವುದರಿಂದ ಇಲ್ಲಿ ವಾಹನ ಸಂಚಾರವೂ ಹೆಚ್ಚಿನ ಮಟ್ಟದಲ್ಲಿದೆ. ಈ ರಸ್ತೆ ಪ್ರಸ್ತುತ ಪುರಸಭೆಯ ವ್ಯಾಪ್ತಿಯಲ್ಲಿದ್ದು, ಬಿಎಂಐಸಿಎಪಿಎ ಸಿದ್ಧಪಡಿಸಿರುವ ನಗರ್ ಯೋಜನಾ ನಕ್ಷೆಯಲ್ಲಿ ಇದನ್ನು 100 ಅಡಿ ರಸ್ತೆಯಾಗಿ ಅಭಿವೃದ್ಧಿಪಡಿಸಲು ಗುರುತು ಮಾಡಲಾಗಿದೆ.

ಯೋಜನಾ ವರದಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ರಸ್ತೆಯನ್ನು 100 ಅಡಿ ಬದಲಾಗಿ 80 ಅಡಿ ಅಗಲಕ್ಕೆ ವಿಸ್ತರಿಸುವ ಪ್ರಸ್ತಾವನೆಯನ್ನು ಸಚಿವ ಸಂಪುಟದ ಅನುಮೋದನೆಗಾಗಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮದ್ದೂರು ಶಾಸಕರಾದ ಕೆ.ಎಂ. ಉದಯ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಹಾಗೂ ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande