
ಹಾಸನ, 02 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಡಿ.6 ರಂದು ಹಾಸನದಲ್ಲಿ ನಡೆಯುವ ಸರ್ಕಾರಿ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ವಿಶೇಷ ಆಸಕ್ತಿವಹಿಸಿ ಜವಾಬ್ದಾರಿ ಮತ್ತು ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸುವಂತೆ ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.
ಹಾಸನ ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಡಿ.6 ರಂದು ನಡೆಯುವ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಕಾರ್ಯಕ್ರಮದ ಸಿದ್ಧತೆ ಕುರಿತು ಇಂದು ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಿ ಮಾತನಾಡಿದ ಅವರು ಫಲಾನುಭವಿಗಳನ್ನು ನಿಗಧಿತ ಸಮಯದಲ್ಲಿ ಕಾರ್ಯಕ್ರಮದ ಸ್ಥಳಕ್ಕೆ ಕರೆದುಕೊಂಡು ಬರಲು ಮುತುವರ್ಜಿವಹಿಸಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕಾರ್ಯಕ್ರಮವು ಅಂದು ಬೆ.11 ಗಂಟೆಗೆ ಪ್ರಾರಂಭವಾಗಬೇಕು, ಮ.2.30 ಕ್ಕೆ ಕಾರ್ಯಕ್ರಮ ಪೂರ್ಣಗೊಳ್ಳಬೇಕು. ಕಾರ್ಯಕ್ರಮಕ್ಕೆ ಆಗಮಿಸುವ ಫಲಾನುಭವಿಗಳಿಗೆ ಸಮಯಕ್ಕೆ ಸರಿಯಾಗಿ ತಿಂಡಿ-ಊಟದ ವ್ಯವಸ್ಥೆಗೆ ಕ್ರಮವಹಿಸಿ ಎಂದರಲ್ಲದೆ, ಯಾವುದೇ ಗೊಂದಲ್ಲಕ್ಕೆ ಅವಕಾಶವಿಲ್ಲದಂತೆ ಸಾವಕಾಶವಾಗಿ ಫಲಾನುಭವಿಗಳು ಬಂದು ಕಾರ್ಯಕ್ರಮದಲ್ಲಿ ಆಸೀನರಾಗಲು ಸೂಕ್ತ ನಿಗಾವಹಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa