
ವಿಜಯಪುರ, 2 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಡಿಸಿಎಂ ಡಿ ಕೆ ಶಿವಕುಮಾರ್ ನಿವಾಸದಲ್ಲಿ ಸಿಎಂ ಬ್ರೇಕ್‌ಪಾಸ್ಟ್ ಮೀಟಿಂಗ್ ಮಾಡಿದ್ದು ಬಹಳ ಒಳ್ಳೆಯದು, ದೇವರು ಒಳ್ಳೆಯ ಬುದ್ದಿ ಕೊಡಲಿ ಎಂದು ಸಚಿವ ಶಿವಾನಂದ ಪಾಟೀಲ್ ಹೇಳಿದರು.
ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಚಿಂತನೆ ವಿಚಾರದಲ್ಲಿ ಈಗಾಗಲೇ ಸಿಎಂ, ಡಿಸಿಎಂ ಪ್ರತಿಕ್ರಿಯಿಸಿದ್ದಾರೆ.
140 ಜನ ಶಾಸಕರು ನಾವು ಒಗ್ಗಟ್ಟಾಗಿಲ್ವಾ ಹೇಗೆ..? ನಮ್ಮ ಒಗ್ಗಟ್ಟಿನ ಬಗ್ಗೆ ಸಂಶಯ ಇದೆಯಾ..? ನಮ್ಮಲ್ಲಿ ಯಾರೇ ಸಿಎಂ ಆದರೂ ಪಕ್ಷ ಬಹಳ ದೊಡ್ಡದು. ಪಕ್ಷವನ್ನು ನಾವು ಬಿಟ್ಟುಕೊಡೊದಿಲ್ಲ. ಪಕ್ಷಕ್ಕಾಗಿ ನಾವು ಹೋರಾಟ ಮಾಡ್ತೇವೆ. ಸರ್ಕಾರ ನಾವು ಬೇಡ ಅಂದ್ರು ಉಳಿಯುತ್ತದೆ. ಬಿಜೆಪಿಗೆ ಬೇಗ ಗದ್ದುಗೆ ಏರುವ ಆತುರತೆ ಇದೆ ಎಂದು ಆಕ್ರೋಶ ಹೊರಹಾಕಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande