
ಗದಗ, 02 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಗ್ರಾಮೀಣ ಜನರ ಜೀವನದಲ್ಲಿ ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಸರ್ಕಾರದಿಂದ ನೀಡಿರುವ ಎಲ್ಲ ಸವಲತ್ತುಗಳನ್ನು ಸದುಪಯೋಗಪಡಿಸಿಕೊಂಡು ಅಭಿವೃದ್ಧಿ ಕಾರ್ಯಗಳನ್ನು ಬೆಳವಣಿಗೆಗೆ ಊರುಗೋಲನ್ನಾಗಿಸಿ ಜನರ ಬದುಕು ಒಟ್ಟಾರೆ ಹಸನಾಗಬೇಕು ಅಂದಾಗ ಮಾತ್ರ ಮಹಾತ್ಮ ಗಾಂಧಿಜಿಯವರು ಕಂಡ ರಾಮ ರಾಜ್ಯದ ಕನಸು ನನಸಾಗಿಸುವ ನಿಟ್ನಿನಲ್ಲಿ ಸರ್ಕಾರ ವಿಶೇಷ ಅವಕಾಶಗಳನ್ನು, ಅನುದಾನವನ್ನು ನೀಡಿ ಪ್ರೋತ್ಸಾಹಿಸುತ್ತಿದೆ ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ ಹೇಳಿದರು.
ಗದಗ ತಾಲೂಕಿನ ಕಣಿವಿ ಗ್ರಾಮದಲ್ಲಿ ನೂತನ ಗ್ರಾಮ ಪಂಚಾಯಿತಿ ಉಪಕಾರ್ಯವನ್ನು ಉದ್ಘಾಟಿಸಿ ಮಾತನಾಡಿದ ಅವರು ಸಮಾಜದ ಕಟ್ಟ ಕಡೆಯ ವ್ಯಕ್ತಿಯು ಉತ್ತಮವಾಗಿ ಬದುಕಬೇಕು ಆ ನಿಟ್ಟಿನಲ್ಲಿ ಸರ್ಕಾರದ ವಿವಿಧ ಯೋಜನೆಗಳು ಜನರ ಮನೆ ಬಾಗಿಲಿಗೆ ತಲುಪುತ್ತಿದ್ದು ಪ್ರತಿಯೊಬ್ಬರೂ ಜವಾಬ್ದಾರಿಯುತವಾಗಿ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಗ್ರಾಮೀಣ ಭಾಗದ ಶೈಕ್ಷಣಿಕ ಸಂಸ್ಥೆಗಳು ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಬಡಮಕ್ಕಳು, ಪ್ರತಿಭಾವಂತರು ಬೆಳವಣಿಗೆ ಹೊಂದುವಂತಾಗಬೇಕು, ಗ್ರಾಮ ಪಂಚಾಯಿತಿ ಗ್ರಾಮದ ಅಭ್ಯುದಯಕ್ಕೆ ಗ್ರಾಮಸ್ಥರ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ರಚನಾತ್ಮಕ ಕೆಲಸಗಳನ್ನು ಮಾಡಲಿ ಎಂದರು.
ಹಿಂದೂಸ್ತಾನ್ ಸಮಾಚಾರ್ / lalita MP