
ರಾಯಚೂರು, 02 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ವಿಕಲಚೇತನರ ಕುಂದು ಕೊರತೆಗಳನ್ನು ಚರ್ಚಿಸಲು ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಡಿಸೆಂಬರ್ 6ರ ಬೆಳಿಗ್ಗೆ 11ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ನಿಗದಿಪಡಿಸಲಾಗಿದ್ದು, ಜಿಲ್ಲೆಯ ವಿಕಲಚೇತನರು ತಮ್ಮ ಅಹವಾಲುಗಳನ್ನು ಸಭೆಯಲ್ಲಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್