
ಬೆಂಗಳೂರು, 02 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಅವರು, ಕೇಂದ್ರ ಸರ್ಕಾರವು ಇತ್ತೀಚೆಗೆ ರೂಪಿಸಿರುವ ನೂತನ ಕಾರ್ಮಿಕ ಸಂಹಿತೆ ಕುರಿತು ವಿಕಾಸಸೌಧದಲ್ಲಿ ಚರ್ಚೆ ನಡೆಸಿದರು.
ಈ ಸಭೆಯಲ್ಲಿ ಕಾರ್ಮಿಕ ಆಯುಕ್ತರಾದ ಡಾ. ಎಚ್ ಎನ್ ಗೋಪಾಲಕೃಷ್ಣ ಭಾ.ಆ.ಸೇ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಾರ್ಯದರ್ಶಿ ಭಾರತಿ ಡಿ. ಅಪರ ಕಾರ್ಮಿಕ ಆಯುಕ್ತರಾದ ಶ್ರೀ ಮಂಜುನಾಥ, ಕಾರ್ಖಾನೆಗಳು ಮತ್ತು ಬಾಯ್ಲರುಗಳ ಇಲಾಖೆಯ ನಿರ್ದೇಶಕರಾದ ಶ್ರೀನಿವಾಸ, ಕಾರ್ಮಿಕ ಕಲ್ಯಾಣ ಮಂಡಳಿಯ ಕಲ್ಯಾಣ ಆಯುಕ್ತರಾದ ಆಂಜನೇಯ, ಜಂಟಿ ಕಾರ್ಮಿಕ ಆಯುಕ್ತರಾದ ಡಾ. ರವಿಕುಮಾರ್, ಉಪ ಕಾರ್ಮಿಕ ಆಯುಕ್ತರಾದ ಉಮೇಶ, ಇಎಸ್ ಐಸಿಯ ಉಪನಿರ್ದೇಶಕರಾದ ಡಾ. ವರದರಾಜ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa