ಸರ್ಕಾರಿ ಕಚೇರಿಗೆ ಅಲೆದಾಡುವದನ್ನು ತಪ್ಪಿಸಲು ಅಧಿಕಾರಿಗಳು ಮನೆ ಬಾಗಿಲಿಗೆ : ಎನ್ಎಸ್ ಬೋಸರಾಜು
ರಾಯಚೂರು, 02 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಜನರು ಸೌಲಭ್ಯಗಳಿಗಾಗಿ ಮಹಾನಗರ ಪಾಲಿಕೆ ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ಮನೆ ಬಾಗಿಲಿಗೆ ಮಹಾನಗರ ಪಾಲಿಕೆ ಎಂಬ ಶೀರ್ಷಿಕೆಡಿ ಜನರ ಮನೆ ಬಾಗಿಲಿಗೆ ಸೌಲಭ್ಯಗಳನ್ನು ನೀಡಲಾಗುತ್ತಿದೆ ನಗರದ ಜನತೆ ಮಹಾನಗರ ಪಾಲಿಕೆಯ ಈ ಅಭಿಯಾನ ಕಾರ
ಸರ್ಕಾರಿ ಕಛೇರಿಗೆ ಅಲೆದಾಡುವದನ್ನು ತಪ್ಪಿಸಲು ಅಧಿಕಾರಿಗಳು ಮನೆ ಬಾಗಿಲಿಗೆ- ಎನ್ಎಸ್ ಬೋಸರಾಜು


ಸರ್ಕಾರಿ ಕಛೇರಿಗೆ ಅಲೆದಾಡುವದನ್ನು ತಪ್ಪಿಸಲು ಅಧಿಕಾರಿಗಳು ಮನೆ ಬಾಗಿಲಿಗೆ- ಎನ್ಎಸ್ ಬೋಸರಾಜು


ಸರ್ಕಾರಿ ಕಛೇರಿಗೆ ಅಲೆದಾಡುವದನ್ನು ತಪ್ಪಿಸಲು ಅಧಿಕಾರಿಗಳು ಮನೆ ಬಾಗಿಲಿಗೆ- ಎನ್ಎಸ್ ಬೋಸರಾಜು


ರಾಯಚೂರು, 02 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಜನರು ಸೌಲಭ್ಯಗಳಿಗಾಗಿ ಮಹಾನಗರ ಪಾಲಿಕೆ ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ಮನೆ ಬಾಗಿಲಿಗೆ ಮಹಾನಗರ ಪಾಲಿಕೆ ಎಂಬ ಶೀರ್ಷಿಕೆಡಿ ಜನರ ಮನೆ ಬಾಗಿಲಿಗೆ ಸೌಲಭ್ಯಗಳನ್ನು ನೀಡಲಾಗುತ್ತಿದೆ ನಗರದ ಜನತೆ ಮಹಾನಗರ ಪಾಲಿಕೆಯ ಈ ಅಭಿಯಾನ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸರಾಜು ಅವರು ತಿಳಿಸಿದರು.

ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಮನೆ ಬಾಗಿಲಿಗೆ ಮಹಾನಗರ ಪಾಲಿಕೆ ಎಂಬ ವಿನೂತನ ಕಾರ್ಯಕ್ರಮದಲ್ಲಿ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸರಾಜು ಅವರು ಇ-ಖಾತಾ ಆಸ್ತಿ ಪ್ರಮಾಣ ಪತ್ರ ನೀಡುವ ಮೂಲಕ ಚಾಲನೆ ನೀಡಿದರು.

ಅಭಿಯಾನದ ಮೂಲಕ ಜನರ ಸಮಸ್ಯೆಗಳನ್ನು ಅವರ ಮನೆ ಬಾಗಿಲಿಗೆ ಹೋಗಿ ನಿವಾರಿಸುವ ಯತ್ನ ನಡೆಸಿದೆ. ಸ್ವಚ್ಚ, ಸುಂದರ ಹಾಗೂ ಸಾರ್ವಜನಿಕರಿಗೆ ಸರಳ ಸೇವೆ ಸಲ್ಲಿಸಲು ಪ್ರಾರಂಭಿಸುವ ಇಂತಹ ಅಭಿಯಾನದಲ್ಲಿ ಸಾರ್ವಜನಿಕರು ಭಾಗವಹಿಸುವ ಮೂಲಕ ಮಹಾನಗರ ಪಾಲಿಕೆಯೊಂದಿಗೆ ನಗರದ ಅಭಿವೃದ್ಧಿಗಾಗಿ ಕೈಜೋಡಿಸಬೇಕಾಗಿದೆ.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸರ್ಕಾರದ ಸೌಲಭ್ಯಗಳನ್ನು ಜನರ ಮನೆಬಾಗಿಲಿಗೆ ತಲುಪಿಸಲು ಆಡಳಿತಾತ್ಮಕವಾಗಿ ತುರುಕುಗೊಳಿಸಲಾಗುತ್ತಿದೆ ಎಂದು ಅಭಿಪ್ರಾಯ ತಿಳಿಸಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಆಯುಕ್ತರಾದ ಜುಬೇನ್ ಮಹಾಪತ್ರ, ಮಹಾನಗರ ಪಾಲಿಕೆಯ ಮಹಾಪೌರರಾದ ನರಸಮ್ಮ ನರಸಿಂಹಲು ಮಾಡಗಿರಿ, ಹಿರಿಯರಾದ ಕೇ ಶಾಂತಪ್ಪ, ಜಯಣ್ಣ, ನರಸಿಂಹಲು ಮಾಡಗಿರಿ ಸೇರಿದಂತೆ ಅನೇಕರು ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande